ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಾವಿದರಿಗೆ ಸೂಕ್ತ ಗೌರವ ಸಿಗುತ್ತಿಲ್ಲ: ಮುರಳೀಧರ್‌ ಹಾಲಪ್ಪ ಬೇಸರ

Published : 29 ಆಗಸ್ಟ್ 2024, 4:38 IST
Last Updated : 29 ಆಗಸ್ಟ್ 2024, 4:38 IST
ಫಾಲೋ ಮಾಡಿ
Comments

ತುಮಕೂರು: ಕಲಾವಿದರಿಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೂಕ್ತ ಗೌರವ ಸಿಗುತ್ತಿಲ್ಲ. ಇದು ದುರಾದೃಷ್ಟದ ಸಂಗತಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಬೇಸರಿಸಿದರು.

ನಗರದಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತು, ಹಾಲಪ್ಪ ಪ್ರತಿಷ್ಠಾನ, ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟದಿಂದ ಆಯೋಜಿಸಿದ್ದ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳ ಬರುವಿಕೆಗೆ ಕಾಯುತ್ತಾರೆ. ಅವರು ಬಂದಾಗ ದೀಪ ಹಚ್ಚಿಸಿ, ಕಾರ್ಯಕ್ರಮ ನಡೆಸುತ್ತಾರೆ. ಕಲೆ ಪ್ರದರ್ಶನಕ್ಕೆ ಅವಕಾಶವೇ ಸಿಗುವುದಿಲ್ಲ. ಇದು ಬದಲಾಗಬೇಕು ಎಂದರು.

ಸಾಂಸ್ಕೃತಿಕ ಸಂಘಟನೆಗಳ ಮಹಾ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೀರೇಶ್‌ ಪ್ರಸಾದ್‌, ‘ಜಿಲ್ಲೆಯಲ್ಲಿ ಕಲಾವಿದರ ಸಂಖ್ಯೆ ಹೆಚ್ಚಿದ್ದು,  ಮಾಶಾಸನ, ಅನುದಾನಕ್ಕೆ ಆನ್‍ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪರದಾಡುತ್ತಾರೆ. ಕಲಾವಿದರು ಒಗ್ಗೂಡಿ ನಮ್ಮ ಕೂಗು ಮುಖ್ಯಮಂತ್ರಿ ಅವರಿಗೆ ತಲುಪುವಂತೆ ಮಾಡಬೇಕು. ಆಗ ಮಾತ್ರ ಕಲಾವಿದರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ’ ಎಂದು ಹೇಳಿದರು.

ನಾಟಕ ಅಕಾಡೆಮಿ ಸದಸ್ಯ ರವೀಂದ್ರ ಸಿರಿವರ, ‘ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ನಾಟಕಗಳು ಪ್ರದರ್ಶನ ಕಾಣುತ್ತಿವೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ನಾಟಕ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ್, ಮಾಯಾ ಬ್ರಹ್ಮಚಾರ್‌, ಸತ್ಯನಾರಾಯಣ, ಹೇಮಾಮಾಲಿನಿ, ಎಚ್.ಎಲ್.ರಂಗನಾಥಪ್ಪ, ಎಸ್.ಎಮ್.ಖಾನ್‌, ಕೆ.ಪಿ.ಅಶ್ವತ್ಥ ನಾರಾಯಣ, ಮುರೂಡಯ್ಯ, ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್‌ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ವೈ.ಎನ್.ಶಿವಣ್ಣ, ಸಾಂಸ್ಕೃತಿಕ ಸಂಘಟನೆಗಳ ಮಹಾ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ಜಯಕುಮಾರ್, ಕಾರ್ಯದರ್ಶಿ ಬಸವರಾಜು ಐನಾಪುರ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT