ತುಮಕೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ಗೌರವಧನ ನಿಗದಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ (ಎಐಯುಟಿಯುಸಿ) ಜ. 7ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ.

‘ಬಡ ಜನರಿಗೆ ಆರೋಗ್ಯ ಸೇವೆ ಒದಗಿಸಲು ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಾರೆ. ರಾಜ್ಯದಲ್ಲಿ ಸುಮಾರು 42 ಸಾವಿರ ಕಾರ್ಯಕರ್ತೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ’ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯೆ ಮಂಜುಳಾ ಗೋನವಾರ ಇಲ್ಲಿ ಶುಕ್ರವಾರ ಹೇಳಿದರು.

ಪ್ರೋತ್ಸಾಹ ಧನಕ್ಕಾಗಿ ‘ಆಶಾನಿಧಿ’ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸಬೇಕಿದ್ದು, ಕಾರ್ಯಕರ್ತೆಯರು ಮಾಡಿದ ಕೆಲಸ ದಾಖಲಾಗದೆ ಕಳೆದ 8 ವರ್ಷಗಳಿಂದ ಪ್ರೋತ್ಸಾಹ ಧನ ಸಿಗುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಲೆಕ್ಕವಿಲ್ಲದಷ್ಟು ಮನವಿ ಸಲ್ಲಿಸಲಾಗಿದೆ. ಆದರೆ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಆಶಾ ಕಾರ್ಯಕರ್ತೆಯರ 3 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಮೊಬೈಲ್ ಕೆಲಸಕ್ಕೆ ಪ್ರೋತ್ಸಾಹ ಧನ ನಿಗದಿಪಡಿಸಬೇಕು. ಪ್ರತಿ ವರ್ಷ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಉಚಿತವಾಗಿ ಚಿಕಿತ್ಸೆ ನೀಡಬೇಕು. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್ ಇತರೆ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಆರ್.ನಿರ್ಮಲ, ಉಪಾಧ್ಯಕ್ಷೆ ಶಾರದಮ್ಮ, ಪದಾಧಿಕಾರಿಗಳಾದ ಅಶ್ವಿನಿ, ಸುಜಾತಾ, ಚೈತ್ರಾ, ಲೋಕಮಣಿ, ದಯಾಮಣಿ, ಮಂಜುಳಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.