ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಪ್ರಜ್ಞೆ ತಪ್ಪಿದ ವ್ಯಕ್ತಿಗೆ ಎಎಸ್‌ಪಿ ನೆರವು

Last Updated 17 ಮೇ 2022, 4:20 IST
ಅಕ್ಷರ ಗಾತ್ರ

ತುಮಕೂರು: ನಗರದ ಬಿಜಿಎಸ್ ವೃತ್ತದ ಬಳಿ ಸೋಮವಾರ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯೊಬ್ಬರನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಟಿ. ಉದೇಶ್‌‌ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು.

ರಸ್ತೆ ದಾಟಲು ಬಂದ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಪೊಲೀಸರು ನೆರವಿಗೆ ಧಾವಿಸಿದರು.ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉದೇಶ್‌ ನಿತ್ರಾಣ ಗೊಂಡ ವ್ಯಕ್ತಿಯನ್ನು ತಮ್ಮ ಕಾರಿ ನಲ್ಲಿ ಆಸ್ಪತ್ರೆಗೆ ರವಾನೆ ಮಾಡಲು ಸಿಬ್ಬಂದಿಗೆ ಸೂಚಿಸಿದರು. ಅವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT