ಶುಕ್ರವಾರ, ಆಗಸ್ಟ್ 19, 2022
27 °C
ರೌಡಿ ಶೀಟರ್ ಮಂಜುನಾಥ್ ಕೊಲೆ ಪ್ರಕರಣ; ಮತ್ತೆ ಮೂವರ ಬಂಧನ

ಗಡ್ಡ ರವಿ ಕೊಲೆ ಪ್ರಕರಣದ ಸಾಕ್ಷಿ ನಾಶಕ್ಕೆ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರೌಡಿ ಶೀಟರ್ ಮಂಜುನಾಥ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಈವರೆಗೆ ಒಟ್ಟು ಐದು ಮಂದಿಯನ್ನು ಬಂಧಿಸಿದಂತಾಗಿದೆ.

ಡಿ. 6ರಂದು ಪ್ರಮುಖ ಆರೋಪಿ ವಿಕಾಸ್‌ ಎಂಬುವರನ್ನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು. ಸದ್ಯ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ‍ಡೆಯುತ್ತಿದ್ದಾರೆ. ಎರಡನೇ ಆರೋಪಿ ಅಜಯ್‌ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಈಗ ತುಮಕೂರಿನ ದೇವಿ ನಗರದ ಅಮಾನ್ (20), ಎನ್‌.ಆರ್‌.ಕಾಲೊನಿಯ ಎಂ.ಮನೋಜ್ (22) ಮತ್ತು ಹನುಮಂತಪುರದ ಮಹೇಶ್ (21) ಎಂಬುವವರನ್ನು ಬಂಧಿಸಿದ್ದಾರೆ.

ಮಂಜುನಾಥ್, ಮಾಜಿ ಮೇಯರ್ ಗಡ್ಡರವಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದರು. ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಕೊಲೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ಅರುಣ್ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪತ್ತೆಗೆ ತಿಲಕ್‌ಪಾರ್ಡ್ ಸಿಪಿಐ ಎಸ್.ಮುನಿರಾಜು ನೇತೃತ್ವದ ತಂಡ ರಚಿಸಲಾಗಿತ್ತು. ಪಿಎಸ್‌ಐ ಶೇಷಾದ್ರಿ, ನವೀನ್, ಸಿಬ್ಬಂದಿ ಪರಮೇಶ್, ಸೈಮನ್ ವಿಕ್ಟರ್, ಮುನಾವರ್ ಪಾಷ, ಹನುಮರಂಗಯ್ಯ, ನರಸಿಂಹಮೂರ್ತಿ, ಲೋಕೇಶ್, ಎಸ್‌.ಎನ್.ನರಸಿಂಹರಾಜು, ನರಸಿಂಹಮೂರ್ತಿ, ಮುಂಜುನಾಥ್, ಸತೀಶ್ ಕಾರ್ಯಾಚರಣೆ ತಂಡದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.