ಮಂಗಳವಾರ, ಮಾರ್ಚ್ 28, 2023
31 °C

ಪೊಲೀಸರ ಮೇಲೆ ಹಲ್ಲೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸರ ಜತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯ ಕಂದಾಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮತ್ತು ರಾಮಚಂದ್ರ ಬಂಧಿತರು.

ಸೋಮವಾರ ರಾತ್ರಿ ಕಾನ್‌ಸ್ಟೆಬಲ್‌ ಗಳಾದ ಮಿಥುನ್ ಮತ್ತು ಸುಮನ್ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಗಸ್ತು ತಿರುಗುತ್ತಿದ್ದರು. ದಾಖಲೆಗಾಗಿ ಮೋದಿ ಕೇರ್ ಅಂಗಡಿ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಮಯದಲ್ಲಿ ಬಂದ ಆರೋಪಿಗಳು ಅವರೊಟ್ಟಿಗೆ ವಾಗ್ವಾದ ನಡೆಸಿ ಅನುಚಿತವಾಗಿ ನಡೆದುಕೊಂಡು ಹಲ್ಲೆ ನಡೆಸಿದ್ದಾರೆ.

ಈ ಇಬ್ಬರ ಉಪಟಳದಿಂದ ಬೇಸತ್ತ ಪೊಲೀಸರು 112 ತುರ್ತು ವಾಹನಕ್ಕೆ ಕರೆ ಮಾಡಿದ್ದಾರೆ. ತುರ್ತು ವಾಹನದ ಸಿಬ್ಬಂದಿ ಮತ್ತು ಸಿಪಿಐ ಗುರುಪ್ರಸಾದ್‌ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಿಥುನ್ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು