ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ಮೇಲೆ ದೌರ್ಜನ್ಯ: ಪ್ರಕರಣ ದಾಖಲು

Published 17 ಆಗಸ್ಟ್ 2023, 15:40 IST
Last Updated 17 ಆಗಸ್ಟ್ 2023, 15:40 IST
ಅಕ್ಷರ ಗಾತ್ರ

ತುಮಕೂರು: ನಗರದ ಬೆಳಗುಂಬ ರಸ್ತೆಯಲ್ಲಿರುವ ಕೆಂಪೇಗೌಡ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬನ ಮೇಲೆ ಇತರೆ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿ ಹಿಂಸೆ ನೀಡಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ವಿದ್ಯಾರ್ಥಿಯನ್ನು ಹಾಸ್ಟೆಲ್ ಕೊಠಡಿಯಲ್ಲಿ ಕೂಡಿಹಾಕಿ ಕಿರುಕುಳ ನೀಡಲಾಗಿದೆ. ಹಾಸ್ಟೆಲ್ ವಾರ್ಡನ್ ಕುಮಾರ್, ಪ್ರಾಂಶುಪಾಲರಾದ ಕನಕಲಕ್ಷ್ಮಿ, ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ವಿರುದ್ಧ ಮಹಿಳಾ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಯಲ್ಲಿ ಇತರೆ ವಿದ್ಯಾರ್ಥಿಗಳು ಸಾಕಷ್ಟು ಹಿಂಸೆ ನೀಡಿದ್ದಾರೆ. ಸಿಗರೇಟ್‌ನಿಂದ ಸುಟ್ಟು, ಲೈಂಗಿಕ ಹಿಂಸೆ ನೀಡಲಾಗಿದೆ. ಈ ವಿಚಾರ ವಾರ್ಡನ್‌ಗೆ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಸ್ವಸ್ಥನಾಗಿದ್ದ ಬಾಲಕನನ್ನು ಪೋಷಕರು ಮನೆಗೆ ಕರೆದುಕೊಂಡು ಹೋಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿದ ನಂತರ ವಿಚಾರ ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT