ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ– ಜೆಡಿಎಸ್‌ ಕಾರ್ಯಕರ್ತರಿಂದ ಹಲ್ಲೆ: ಕಾಂಗ್ರೆಸ್ ಮುಖಂಡ ಆರೋಪ

Published 8 ಏಪ್ರಿಲ್ 2024, 4:36 IST
Last Updated 8 ಏಪ್ರಿಲ್ 2024, 4:36 IST
ಅಕ್ಷರ ಗಾತ್ರ

ಕುಣಿಗಲ್: ‘ತಾಲ್ಲೂಕಿನ ನಡೆಮಾವಿನಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ವೆಂಕಟೆಗೌಡನಪಾಳ್ಯದ ಕೀರ್ತಿ ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕೀರ್ತಿ ಪಂಚಾಯಿತಿ ಪಕ್ಕದಲ್ಲಿರುವ ಟೀ ಅಂಗಡಿ ಬಳಿ ನಿಂತಿದ್ದಾಗ ಅಲ್ಲಿಗ ಬಂದ ‘ಮೈತ್ರಿ’ ಕಾರ್ಯಕರ್ತರಾದ ನಡೆಮಾವಿನಪುರ ಅಣೆ ಚಂದ್ರ, ಸುನಿಲ್ ಮತ್ತು ಕಲ್ಲೆಗೌಡನಪಾಳ್ಯದ ಜಗದೀಶ್ ಅವರು, ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಯ ವೇಳೆ ಕಾರ್ಯಕರ್ತರನ್ನು ಕರೆದುಕೊಂಡು ಹೋದ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ನಂತರ ಮಾತಿನ ಮಾತಿನ ಚಕಮಕಿ ನಡೆದು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಕೀರ್ತಿ ಅವರನ್ನು ಸ್ಥಳೀಯರು ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT