ಸೋಮವಾರ, ಜೂನ್ 14, 2021
21 °C

ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ತಾಲ್ಲೂಕಿನ ವಿವಿಧೆಡೆ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅಧಿಕಾರಿಗಳೊಂದಿಗೆ ಮಂಗಳವಾರ ದಾಳಿ ನಡೆಸಿದರು.

ಕೋವಿಡ್– 19 ನಿಯಂತ್ರಿಸುವ ಸಲುವಾಗಿ ಪಿ.ರೊಪ್ಪ, ಕಿಲಾರ್ಲಹಳ್ಳಿ, ಸಿ.ಕೆ.ಪುರ, ಮಂಗಳವಾಡ, ಅರಸೀಕೆರೆ ಸೇರಿದಂತೆ ವಿವಿಧೆಡೆ ದಿಢೀರ್ ದಾಳಿ ನಡೆಸಲಾಯಿತು.

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಬೀಗ ಹಾಕಿ ಸೀಜ್ ಮಾಡಲಾಯಿತು. ಮತ್ತೆ ಜನತೆಗೆ ಔಷಧಿ ನೀಡದಂತೆ ನಕಲಿ ವೈದ್ಯರಿಗೆ ಎಚ್ಚರಿಕೆ ನೀಡಲಾಯಿತು.

ಕೋವಿಡ್– 19 ಪರೀಕ್ಷೆ ಮಾಡದೆ ಚಿಕಿತ್ಸೆ ನೀಡುವಂತಿಲ್ಲ. ಆದರೆ ನೆಗಡಿ, ಜ್ವರ, ಕೆಮ್ಮು ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ನಕಲಿ ವೈದ್ಯರು ಔಷಧಿ ನೀಡುತ್ತಿದ್ದಾರೆ ಎಂಬ ವಿಚಾರ ಗಮನಕ್ಕೆ ಬಂದಿತು. ಕೋವಿಡ್– 19 ಸೋಂಕು ತೀವ್ರಗೊಂಡ ನಂತರ ಜನತೆ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಇದರಿಂದ ಜನತೆ ಜೀವಕ್ಕೆ ಸಮಸ್ಯೆಯಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.

ನಿಯಮಾವಳಿಗಳನ್ನು ಉಲ್ಲಂಘಿಸಿ ನಕಲಿ ವೈದ್ಯರು ಸಾರ್ವಜನಿಕರಿಗೆ ಚಿಕಿತ್ಸೆ ನೀಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಅಗತ್ಯ ಪದವಿ ಪಡೆಯದೆ ಜನರ ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಿ. ನಕಲಿ ವೈದ್ಯರು ಚಿಕಿತ್ಸೆ ನೀಡುವುದು ಕಂಡುಬಂದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ಸಿ.ಕೆ.ಪುರದಲ್ಲಿ ಸಾರ್ವಜನಿಕರಿಗೆ ತಿಳಿಸಿದರು.

ತಹಶೀಲ್ದಾರ್ ಕೆ.ಆರ್.ನಾಗರಾಜು, ಗ್ರೇಡ್ 2 ತಹಶೀಲ್ದಾರ್ ಎನ್.ಮೂರ್ತಿ, ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮಿಕಾಂತ್, ತಾಲ್ಲೂಕು ವೈದ್ಯಾಧಿಕಾರಿ ತಿರುಪತಯ್ಯ, ಕಂದಾಯ ನಿರೀಕ್ಷಕ ರಾಜಗೋಪಾಲ್, ಗ್ರಾಮ ಲೆಕ್ಕಿಗ ಗಿರೀಶ್, ಪೊಲೀಸ್ ಸಿಬ್ಬಂದಿ ನಾಗಭೂಷಣರೆಡ್ಡಿ, ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು