ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳ ಅಪಹರಿಸಲು ಯತ್ನ

ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ
Published : 6 ಆಗಸ್ಟ್ 2024, 16:44 IST
Last Updated : 6 ಆಗಸ್ಟ್ 2024, 16:44 IST
ಫಾಲೋ ಮಾಡಿ
Comments

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮಕ್ಕಳ ಕಳ್ಳತನ, ಮಾರಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈಗ ಮತ್ತೊಮ್ಮೆ ಮಕ್ಕಳ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದೆ.

ನಗರ ಹೊರವಲಯದ ಅಣ್ಣೇನಹಳ್ಳಿ ಬಳಿ ಭಾನುವಾರ ಮಕ್ಕಳ ಅಪಹರಣಕ್ಕೆ ಯತ್ನ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರು, ಮಕ್ಕಳನ್ನು ಅಪಹರಿಸಲು ಮುಂದಾಗಿದ್ದಾರೆ. ಮಕ್ಕಳು ಜೋರಾಗಿ ಕಿರುಚಿಕೊಂಡ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಈ ದೃಶ್ಯ ಹತ್ತಿರದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಣ್ಣೇನಹಳ್ಳಿಯ ವೆಂಕಟೇಶ್‌ ಎಂಬುವರು ದೂರು ನೀಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯಶವಂತ್‌, ತನಿಷ್ಕ್‌ ಕೃಷ್ಣ ಎಂಬ ಮಕ್ಕಳು ಕಾರಾಗೃಹದ ಬಳಿಯ ಸ್ವರ್ಣಗೃಹದ ಬಡಾವಣೆಯಲ್ಲಿ ಭಾನುವಾರ ಮಧ್ಯಾಹ್ನ ಆಟವಾಡುತ್ತಿದ್ದರು. ಈ ಸಮಯದಲ್ಲಿ ಸ್ಥಳಕ್ಕೆ ಬಂದ ಕಳ್ಳರು ಯಶವಂತ್‌ನನ್ನು ಬೈಕ್‌ನಲ್ಲಿ ಹತ್ತಿಸಿಕೊಳ್ಳಲು ಮುಂದಾಗಿದ್ದಾರೆ. ಇದನ್ನು ಕಂಡ ತನಿಷ್ಕ್‌ ಜೋರಾಗಿ ಕಿರುಚಿಕೊಂಡ, ಇದನ್ನು ಗಮನಿಸಿ ಸ್ಥಳಕ್ಕೆ ಹೋದಾಗ ಕಳ್ಳರು ಅಲ್ಲಿಂದ ಪರಾರಿಯಾರು’ ಎಂದು ವೆಂಕಟೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಬೈಕ್‌ ಹಿಂದೆ ಓಡಿದರೂ ನಿಲ್ಲಿಸದೆ ಹೋದರು. ಮಕ್ಕಳನ್ನು ಅಪಹರಿಸಲು ಪ್ರಯತ್ನಿಸಿದವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ’ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT