ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ತಡೆಗೆ ಜಾಗೃತಿ ಅಗತ್ಯ

Last Updated 4 ಜನವರಿ 2022, 6:29 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ. ಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,ಕೋವಿಡ್‌ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಅಂತರ ಕಾಪಾಡಿಕೊಳ್ಳುವ ಬಗ್ಗೆ ತಿಳಿಹೇಳಬೇಕು ಎಂದರು.

ಸರ್ಕಾರದ ಮಾರ್ಗಸೂಚಿ ಪಾಲಿಸುವುದು ‍ಪ್ರತಿಯೊಬ್ಬರ ಕರ್ತವ್ಯ. ಆಗ ಮಾತ್ರ ಕೋವಿಡ್‌ ಸೋಂಕು ತಡೆಗಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಕಾರ್ಯ ನಿರ್ವಹಿಸಬೇಕು ಎಂದು
ಸೂಚಿಸಿದರು.

ತಹಶೀಲ್ದಾರ್ ಬಿ. ತೇಜಸ್ವಿನಿ, ತಾಲ್ಲೂಕು ಆರೋಗ್ಯಾಧಿಕಾರಿ ನವೀನ್, ಪ್ರಭಾರ ಬಿಇಒ ಸಂಗಮೇಶ್‌ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲ್ಲೂಕು ವ್ಯಾಪ್ತಿಯ ವಿವಿಧ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT