ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಬೆಳೆಯಲು ಅರಿವು: ಗೋವಿಂದಯ್ಯ

ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟಕ್ಕೆ ಆಯ್ಕೆ
Last Updated 28 ಜನವರಿ 2021, 1:38 IST
ಅಕ್ಷರ ಗಾತ್ರ

ತುಮಕೂರು: ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಮತ್ತು ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

‘ಜಿಲ್ಲೆಯಲ್ಲಿ ಸಾವಯವ ಕೃಷಿ ಉತ್ಪಾದನೆ ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ರೈತರಲ್ಲಿ ಸಾವಯವ ಕೃಷಿ ಹಾಗೂ ಸಿರಿಧಾನ್ಯ ಬೆಳೆಯಲು ಅರಿವು ಮೂಡಿಸಲಾಗುವುದು’ ಎಂದು ಒಕ್ಕೂಟದ ನೂತನ ಅಧ್ಯಕ್ಷ ಗೋವಿಂದಯ್ಯ ತಿಳಿಸಿದರು.

ಕೃಷಿ ಇಲಾಖೆ ಸಹಯೋಗದೊಂದಿಗೆ ಸಾವಯವ ಕೃಷಿಗೆ ಉತ್ತೇಜನ ನೀಡಲಾಗುವುದು. ಸಾವಯವ ಕೃಷಿಗೆ ಉತ್ತಮ ಮಾರುಕಟ್ಟೆ ನಿರ್ಮಾಣ ಮಾಡುವ ಗುರಿ ಇದೆ ಎಂದು ಹೇಳಿದರು.

ಸಿರಿಧಾನ್ಯ ಇಂದಿನ ಆಧುನಿಕ ಬದುಕಿಗೆ ಅವಶ್ಯಕವಾಗಿದೆ. ರೈತರು ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯುವ ಮೂಲಕ ಉತ್ತಮ ಲಾಭ ಪಡೆಯಬಹುದು. ಒಕ್ಕೂಟದಿಂದ ಸ್ಥಾಪನೆಗೊಂಡಿರುವ ಸಿರಿಧಾನ್ಯ ಸಂಸ್ಕ
ರಣಾ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಿರಿಧಾನ್ಯದ ಉತ್ಪನ್ನಗಳನ್ನು ಖರೀದಿಸುತ್ತಿರುವುದು ಸಂತಸದ ವಿಚಾರ ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ, ‘ಸಾವಯವ ಕೃಷಿಗೆ ಸರ್ಕಾರದಿಂದ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮಳೆಯಾಶ್ರಿತ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ಸಿರಿಧಾನ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವ ರೈತರು ಇದರ ಉಪಯೋಗ ಪಡೆದುಕೊಳ್ಳಬೇಕು’ ಎಂದರು.

ಒಕ್ಕೂಟದ ಸಿಇಒ ಆರ್.ಕೆ.ಮಧು, ಸಿಬ್ಬಂದಿ ಅಶ್ವತ್ಥ ನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT