ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಲಾರಿ ನಡುವೆ ಸರಣಿ ಅಪಘಾತ; ಯುವಕ ಸಾವು

Last Updated 9 ಜೂನ್ 2019, 16:25 IST
ಅಕ್ಷರ ಗಾತ್ರ

ಶಿರಾ: ರಾಷ್ಟ್ರೀಯ ಹೆದ್ದಾರಿ - 48ರ ಶಿರಾ ಬೈಪಾಸ್‌ನಲ್ಲಿ ಭಾನುವಾರ ಮೂರು ಲಾರಿಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಹಿರಿಯೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದೇ ಲಾರಿ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಲಾರಿಯ ಚಾಲಕ ಹರಿಯಾಣ ರಾಜ್ಯದ ದಿಲೀಪ್ ಸಿಂಗ್ (28) ಮೃತ ಪಟ್ಟಿದ್ದಾರೆ. ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಅವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಅಪಘಾತದಿಂದಾಗಿ ಸುಮಾರು ಒಂದು ಗಂಟೆ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತಥವ್ಯಸ್ತವಾಗಿತ್ತು. ಪೊಲೀಸರು ಅಪಘಾತವಾಗಿದ್ದ ಲಾರಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು. ಶಿರಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT