ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದೇ ಪದೇ ಅಭ್ಯಾಸ; ಹೆಚ್ಚು ಅಂಕ

‘ಎಸ್ಸೆಸ್ಸೆಲ್ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ’ ಕುರಿತ ಕಾರ್ಯಾಗಾರ
Last Updated 30 ನವೆಂಬರ್ 2019, 15:25 IST
ಅಕ್ಷರ ಗಾತ್ರ

ತುಮಕೂರು: ಓದಿದ ವಿಷಯವನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಪದೇ ಪದೇ ಪುನರ್ ಪಠಣ (ರೀಕಾಲ್‌) ಮಾಡಬೇಕು ಎಂದು ಜಿಲ್ಲಾ ಬಾಲಭವನದ ಸದಸ್ಯ ಎಂ.ಬಸವಯ್ಯ ಸಲಹೆ ನೀಡಿದರು.

ಜಿಲ್ಲಾ ಬಾಲಭವನ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ಬಾಲಭವನದಲ್ಲಿ ಆಯೋಜಿಸಿದ್ದ ‘ಎಸ್ಸೆಸ್ಸೆಲ್ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಪದೇ ಪದೇ ಅಭ್ಯಾಸ ಮಾಡುವುದರಿಂದ ಓದಿದ ವಿಷಯ ಮನಸ್ಸಿನಲ್ಲಿ ಹೆಚ್ಚಿನದಾಗಿ ಉಳಿಯುತ್ತದೆ. ಇದರಿಂದ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯ ಆಗುತ್ತದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಮಾತನಾಡಿ, ‘ಇಂತಹ ಕಾರ್ಯಕ್ರಮ ಪರೀಕ್ಷೆಗೆ ಆತ್ಮವಿಶ್ವಾಸ ಮೂಡಿಸುತ್ತದೆ. ಮಕ್ಕಳಿಗೆ ಶಿಸ್ತು, ಸಮಯ ಪ್ರಜ್ಞೆ ಬಹಳ ಅಗತ್ಯ. ಮಕ್ಕಳಲ್ಲಿ ಶಕ್ತಿಯ ಜೊತೆಗೆ ಆಸಕ್ತಿಯೂ ಇರಬೇಕು’ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಲ್ಲಿ ಒಳ್ಳೆಯ ಅಭ್ಯಾಸ ಹಾಗೂ ಹವ್ಯಾಸ ಇರಬೇಕು. ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಂಡರೆ ಒಳ್ಳೆಯ ಫಲಿತಾಂಶ ಪಡೆಯಲು ಸಾಧ್ಯ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಇಂತಹ ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು. ಶೈಕ್ಷಣಿಕವಾಗಿ ಹಿಂದುಳಿದಿರುವ ಮಕ್ಕಳನ್ನು ಮುಂದೆ ತರುವುದು ಈ ಕಾರ್ಯಾಗಾರದ ಉದ್ದೇಶ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಬಂಡೀವೀರಪ್ಪ, ಹನುಮನಾಯಕ್, ಸಂಪನ್ಮೂಲ ವ್ಯಕ್ತಿಗಳಾದ ಮೂರ್ತಿ, ಜಗದೀಶ್, ವಿಷಯ ಪರಿವೀಕ್ಷಕಿ ಪ್ರತಿಭಾ, ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಎಸ್.ಶ್ರೀಧರ್, ಶಿವಕುಮಾರಯ್ಯ, ಹೊನ್ನೇಶಪ್ಪ, ಓಂಕಾರಪ್ಪ, ಸ್ವಾಮಿ, ತಿಪ್ಪೇಸ್ವಾಮಿ, ಅನುಷಾ ಹಾಗೂ ಕಾರ್ಯಕ್ರಮ ಸಂಯೋಜಕಿ ಪಿ.ಮಮತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT