ಸೋಮವಾರ, ಸೆಪ್ಟೆಂಬರ್ 27, 2021
21 °C

ಗೊರವನಹಳ್ಳಿ ದೇಗುಲ ದರ್ಶನಕ್ಕೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವರ ದರ್ಶನಕ್ಕೆ ಹಬ್ಬದ ಸಂದರ್ಭದಲ್ಲಿ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ನಾಗರಪಂಚಮಿ, ವರಮಹಾಲಕ್ಷ್ಮಿ ಸೇರಿದಂತೆ ಮುಂದಿನ ಹಬ್ಬದ ದಿನಗಳಂದು ಪ್ರವೇಶ ಇರುವುದಿಲ್ಲ.

ಕೋವಿಡ್ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಭಕ್ತರಿಗೆ ದೇಗುಲ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹಾಗಾಗಿ ದೇಗುಲಕ್ಕೆ ಪ್ರವೇಶ ನೀಡುತ್ತಿಲ್ಲ ಎಂದು ಮಹಾಲಕ್ಷ್ಮಿ ಚಾರಿಟೆಬಲ್ ಟ್ರಸ್ಟ್ ಕಾರ್ಯನಿರ್ವಾಹಕ ಅಧಿಕಾರಿ ಕೇಶವಮೂರ್ತಿ ತಿಳಿಸಿದ್ದಾರೆ.

ಶನಿವಾರ, ಭಾನುವಾರ, ಸೋಮವಾರ ಹಾಗೂ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪೂಜೆಗೆ ಅವಕಾಶವಿಲ್ಲ. ಕೇವಲ ದರ್ಶನ ಪಡೆಯಬಹುದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.