ತುಮಕೂರು: ಜನ ಮಿತ್ರ ಮೂವೀಸ್ ವತಿಯಿಂದ ಹಮ್ಮಿಕೊಂಡಿರುವ ‘ಸಮುದಾಯದತ್ತ ಸಿನಿಮಾ– ರಾಜ್ಯದಾದ್ಯಂತ ಚಿತ್ರಯಾತ್ರೆ’ಗೆ ನಗರದ ಕನ್ನಡ ಭವನದಲ್ಲಿ ಶನಿವಾರ ಚಾಲನೆ ದೊರೆಯಿತು.

ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ತಾಯಿ ಕಸ್ತೂರ್ ಗಾಂಧಿ’ ಚಲನಚಿತ್ರ ಪ್ರದರ್ಶಿಸಲಾಯಿತು. ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರು ಸಿನಿಮಾ ವೀಕ್ಷಿಸಿದರು.

‘ಚಿತ್ರಯಾತ್ರೆ ಪರಿಕಲ್ಪನೆ ರೂಪಿಸಿ, ಜನರ ಹತ್ತಿರ ಸಿನಿಮಾ ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ರಾಜ್ಯದ ಎಲ್ಲ ಕಡೆ ಈ ಯಾತ್ರೆ ನಡೆಯಲಿದೆ. ಜಿಲ್ಲೆಯಲ್ಲಿ ಮೊದಲ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಪರ್ಯಾಯ ಸಿನಿಮಾ ಎದುರಿಸುವ ಸವಾಲು ದುಪ್ಪಟ್ಟಾಗಿದೆ. ಸಿನಿಮಾ ವೀಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಮಲ್ಟೆಪ್ಲೆಕ್ಸ್ಗಳಲ್ಲಿ ಒಂದು ವಾರ ಸಿನಿಮಾ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಕನ್ನಡ ಸಿನಿಮಾಗಳಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ಇದಕ್ಕಾಗಿ ಸರ್ಕಾರ ಮಿನಿ ಚಿತ್ರ ಮಂದಿರ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಜನರನ್ನು ತಲುಪಲು, ನಿರ್ಮಾಪಕರಿಗೆ ಹಣ ಒದಗಿಸುವ ಉದ್ದೇಶದಿಂದ ಸಮುದಾಯದತ್ತ ಸಿನಿಮಾ ಚಿತ್ರಯಾತ್ರೆ ಆರಂಭಿಸಲಾಗಿದೆ. ‘ತಾಯಿ ಕಸ್ತೂರ್ ಗಾಂಧಿ’ ಸಿನಿಮಾ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಚಿತ್ರ ಪ್ರಶಸ್ತಿ ಪಡೆದಿದೆ ಎಂದು ಮಾಹಿತಿ ಹಂಚಿಕೊಂಡರು.

ಪ್ರಜಾವಾಣಿ ‘ಅಭಿಮತ’ ಸಂಪಾದಕ ಚ.ಹ.ರಘುನಾಥ ಚಿತ್ರಯಾತ್ರೆಗೆ ಚಾಲನೆ ನೀಡಿದರು. ಚಿಂತಕ ಕೆ.ದೊರೈರಾಜ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಡಿಡಿಪಿಐ ರಘುಚಂದ್ರ, ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.