ಹೊರವಲಯದಲ್ಲಿ ನೀರಸ ಪ್ರತಿಕ್ರಿಯೆ

7

ಹೊರವಲಯದಲ್ಲಿ ನೀರಸ ಪ್ರತಿಕ್ರಿಯೆ

Published:
Updated:

ದಾಬಸ್‌ಪೇಟೆ: ಬಂದ್‌ಗೆ ದಾಬಸ್‌ಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ತೆರೆದಿರಲಿಲ್ಲ. ಆಸ್ಪತ್ರೆ, ಬ್ಯಾಂಕ್‌ಗಳು ಕಾರ್ಯ ನಿರ್ವಹಿಸಿದವು. ಕೆಲವು ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿದ್ದಾಗ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಲವಂತವಾಗಿ ಮುಚ್ಚಿಸಲು ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪಟ್ಟಣದ ವೃತ್ತದಲ್ಲಿನ ದಿನಸಿ, ತರಕಾರಿ ಅಂಗಡಿಗಳು ಎಂದಿನಂತೆ ವಹಿವಾಟು ನಡೆಸಿದವು. ರಸ್ತೆಯಲ್ಲಿ ವಾಹನಗಳ ಸಂಖ್ಯೆ ವಿರಳವಾಗಿತ್ತು.

ಬಾರ್‌ಗಳಿಗೆ ಸುಗ್ಗಿ: ಹೆಸರಘಟ್ಟದಲ್ಲಿ ಬೆಳಿಗ್ಗೆಯಿಂದಲೇ ಗ್ರಾಮದ ಹಲವರು ಬಾರ್‌ಗಳತ್ತ ಮುಖ ಮಾಡಿದರು. ಗ್ರಾಮದಲ್ಲಿರುವ ಎರಡು ಮದ್ಯದ ಅಂಗಡಿಗಳು ಬೆಳಿಗ್ಗೆ 8ರ ಸುಮಾರಿಗೆ ಬಾಗಿಲು ತೆರೆದಿದ್ದವು. ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದಲ್ಲಿ ಯುವ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಎತ್ತಿನಗಾಡಿಯಲ್ಲಿ ಮೆರವಣಿಗೆ ಮಾಡಿದರು.

ಮಿಶ್ರ ಪ್ರತಿಕ್ರಿಯೆ: ಹೊಸಕೋಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂಗಡಿ ಮುಂಗಟ್ಟುಗಳು ಭಾಗಶಃ ಮುಚ್ಚಿದ್ದವು. ಬಸ್‌ ಸಂಚಾರ ಇರಲಿಲ್ಲ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ತೆರೆದಿದ್ದವು.
ಸಿಪಿಎಂ ಮತ್ತು ಪ್ರಾಂತ ರೈತ ಸಂಘದ ಸದಸ್ಯರು ವಕೀಲ ಹರೀಂದ್ರ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು. 

ಪೀಣ್ಯದಾಸರಹಳ್ಳಿಯಲ್ಲಿ ತೈಲಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬಾಗಲಗುಂಟೆ ಬಸ್‌ ನಿಲ್ದಾಣದಲ್ಲಿ ಟೈರ್‌ಗೆ ಬೆಂಕಿ ಹಚ್ಚಿದರು. ಕಾರಿಗೆ ಹಗ್ಗಕಟ್ಟಿ ಎಳೆದು ಬೆಲೆ ಏರಿಕೆಯ ಪರಿಸ್ಥಿತಿಯನ್ನು ಅಣಕಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !