ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನತೆಯ ಸಮಾಜ ಕಟ್ಟಿದ ಬಸವಣ್ಣ: ವೆಂಕಟೇಶ್ವರಲು

Published 11 ಮೇ 2024, 6:11 IST
Last Updated 11 ಮೇ 2024, 6:11 IST
ಅಕ್ಷರ ಗಾತ್ರ

ತುಮಕೂರು: ಬಸವಣ್ಣನವರ ಸಾಂಸ್ಕೃತಿಕ ಚಳವಳಿಯಿಂದಾಗಿ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಯಿತು ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.

ವಿ.ವಿಯಲ್ಲಿ ಶುಕ್ರವಾರ ಬಸವೇಶ್ವರರ ಜಯಂತಿ ಪ್ರಯುಕ್ತ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ವರ್ಗ, ವರ್ಣ, ಲಿಂಗಭೇದವಿಲ್ಲದ ಸಮಾನತೆಯ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದರು. ಸಮಾಜದ ವಿವಿಧ ಶೋಷಿತ ಸಮುದಾಯಗಳನ್ನು ಒಗ್ಗೂಡಿಸಿದ್ದರು. ನಾವೆಲ್ಲರು ಬಸವಣ್ಣನವರ ಆದರ್ಶ ಮೈಗೂಡಿಸಿಕೊಂಡು ಬದುಕು ಸಾಗಿಸಬೇಕು ಎಂದರು.

ಕದಳಿ ಮಹಿಳಾ ವೇದಿಕೆಯ ನಾಗರತ್ನ ಮತ್ತು ತಂಡದವರಿಂದ ಬಸವಣ್ಣನವರ ವಚನಗಳ ಗಾಯನ ನಡೆಯಿತು. ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್‌, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ, ಕಲಾ ನಿಕಾಯದ ಡೀನ್ ಪ್ರೊ.ಎಂ.ಕೊಟ್ರೇಶ್‌, ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಯಶೀಲ, ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ವೆಂಕಟರೆಡ್ಡಿ ರಾಮರೆಡ್ಡಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಂಯೋಜಕ ಎ.ಎಂ.ಮಂಜುನಾಥ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT