ಬುಧವಾರ, ಜುಲೈ 28, 2021
23 °C

ತುಮಕೂರು | ‘ಡಿಕೆಶಿ ಪದಗ್ರಹಣ; ರಾಜಕಾರಣ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ‘ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಮಾಡುವ ವಿಚಾರದಲ್ಲಿ ರಾಜಕೀಯ ಮಾಡುವಂತಹದ್ದು ಏನೂ ಇಲ್ಲ. ಅದರ ಅಗತ್ಯವೂ ಬಿಜೆಪಿಗೆ ಇಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಬುಧವಾರ ಹೇಳಿದರು.

ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಅವರು ವಿರೋಧ ಪಕ್ಷದವರು, ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಕಾನೂನಿನಲ್ಲಿ ಏನು ಅವಕಾಶ ಇದೆಯೋ ಆ ರೀತಿ ಮಾಡುತ್ತೇವೆ. ಕಾನೂನು ಬಿಡಲು ಸಾಧ್ಯವಿಲ್ಲ’ ಎಂದರು.

‘ಪದಗ್ರಹಣ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾಡುವ ಆರೋಪಗಳು ಸತ್ಯಕ್ಕೆ ದೂರವಾದವು. ಯಾವಾಗ, ಎಲ್ಲಿ ಪದಗ್ರಹಣ ಮಾಡಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು