ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಎಂಟು ಬಾವಲಿಗಳನ್ನು ಕೊಂದ ನಾಲ್ವರ ಬಂಧನ

Published 29 ಅಕ್ಟೋಬರ್ 2023, 13:24 IST
Last Updated 29 ಅಕ್ಟೋಬರ್ 2023, 13:24 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದ ನಾಲ್ವರನ್ನು ವಲಯ ಅರಣ್ಯಾಧಿಕಾರಿ ಭಾನುವಾರ ಬಂಧಿಸಿದ್ದಾರೆ.

ಮಾಗಡಿ ತಾಲ್ಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಬಂಧಿತರು.

ಕಾಡರಾಮನಹಳ್ಳಿ ಜಮೀನೊಂದರ ಮರದಲ್ಲಿದ್ದ ಎಂಟು ಬಾವಲಿಗಳನ್ನು ಆರೋಪಿಗಳು ಹೊಡೆದು ಹಾಕಿದ್ದರು.

ಖಚಿತ ಮಾಹಿತಿ ಮೇರೆಗೆ ಹುಲಿಯೂರುದುರ್ಗ ವಲಯ ಅರಣ್ಯ ಅಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸತ್ತ ಬಾವಲಿಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT