ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಸಮೀಕ್ಷೆ; ಕಚೇರಿಗೆ ಅಲೆದಾಡದಿರಿ

‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಚಾಲನೆ
Last Updated 14 ಆಗಸ್ಟ್ 2020, 16:10 IST
ಅಕ್ಷರ ಗಾತ್ರ

ತುಮಕೂರು: ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಶುಕ್ರವಾರ ಚಾಲನೆ ನೀಡಿದರು.

ತಾಲ್ಲೂನ ಕೋರ ಹೋಬಳಿ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಚಿತ್ರ ಅಪ್‍ಲೋಡ್ ಮಾಡುವ ಮೂಲಕ ಚಾಲನೆ ನೀಡಿದರು. ‘3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್‌ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಚಿತ್ರ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಚಿತ್ರ ತೆಗೆದು ಸ್ವಯಂ ಅಪ್‍ಲೋಡ್ ಮಾಡಬಹುದು’ ಎಂದರು.

ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ತಾವೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ಪಡೆಯಲು ಉಪಯೋಗ ಆಗುತ್ತದೆ ಎಂದು ವಿವರಿಸಿದರು.

ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ಆ. 24ಕಡೆಯ ದಿನವಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT