ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ತಾಲ್ಲೂಕು ಕೇಂದ್ರಗಳಲ್ಲಿ ಶೀತಲೀಕರಣ ಘಟಕ

ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
Last Updated 22 ಏಪ್ರಿಲ್ 2020, 15:53 IST
ಅಕ್ಷರ ಗಾತ್ರ

ತುಮಕೂರು: ‘ಈಗಾಗಲೇ ಹಲವು ಜಿಲ್ಲೆಗಳ ಪ್ರವಾಸ ಮುಗಿಸಿದ್ದೇನೆ. ಎಲ್ಲ ಕಡೆಗಳಲ್ಲೂ ರೈತರ ಉತ್ಪನ್ನಗಳನ್ನು ಶೇಖರಿಸಲು ಶೀತಲೀಕರಣ ಘಟಕಗಳು ಅವಶ್ಯಕ ಎನ್ನುವ ಬೇಡಿಕೆ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಶೀತಲೀಕರಣ ಘಟಕ ಸ್ಥಾಪನೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಿದ್ದೇನೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳಪೆ ಹಾಗೂ ಅವಧಿ ಪೂರ್ಣಗೊಂಡ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಬೆಳವಣಿಗೆಗಳ ಮೇಲೆ ನಿಗಾ ವಹಿಸಲು ರಾಜ್ಯಮಟ್ಟದಲ್ಲಿ ಮೂರು ತಂಡ ರಚಿಸಲಾಗಿದೆ. ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಒಳಗೊಂಡ ವಿಚಕ್ಷಣಾದಳ ರಚಿಸಲಾಗಿದೆ’ ಎಂದು ತಿಳಿಸಿದರು.

ಅಕ್ರಮ ಎಸಗಿದ ಆರೋಪದ ಮೇಲೆ ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಅಂಗಡಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇಂತಹ ಅಕ್ರಮಗಳು ಕಂಡು ಬಂದರೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರನ್ನೂ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT