ಗುಬ್ಬಿ: ಉತ್ತಮ ಸಮಾಜ ನಿರ್ಮಾಣ ಹಾಗೂ ಈ ದೇಶದ ಅಭಿವೃದ್ಧಿಯ ಬಗ್ಗೆ ಅಪಾರ ಕನಸು ಕಂಡಿದ್ದ ಸ್ವಾಮಿ ವಿವೇಕಾನಂದರ ಸ್ಮರಣೆ ನಿತ್ಯ ನೂತನವಾಗಿರಬೇಕು ಎಂದು ನಿವೃತ್ತ ಶಿಕ್ಷಕ ಬಿ.ಸಿ ಶಿವಣ್ಣ ಹೇಳಿದರು.

ದಾಸರ ಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಯುವ ಪೀಳಿಗೆ ಅಮೂಲ್ಯವಾದ ಸಂಪತ್ತಾಗಿದೆ. ಅವರಿಗೆ ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಬಲಿಷ್ಠ ದೇಶ ಕಟ್ಟಲು ಸಾಧ್ಯ. ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಿ ಎಲ್ಲರಲ್ಲಿಯೂ ಒಂದೇ ಎಂಬ ಭಾವನೆ ಮೂಡಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ಅಂಬೇಡ್ಕರ್ ದೇಶದ ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶ್ವ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿದ್ದುಕೊಂಡು ಸಾಗೋಣ ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಮಾತನಾಡಿ, ಯುವಕರನ್ನು ಪ್ರೇರೇಪಿಸುತ್ತಾ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸಂಘ ಸ್ಥಾಪಿಸಲಾಗಿದೆ. ಈಗಾಗಲೇ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಶೋಷಿತ ಜನರ ಧ್ವನಿಯಾಗುತ್ತಿದ್ದೇವೆ ಎಂದು ತಿಳಿಸಿದರು.

ಆನಂದಮೂರ್ತಿ, ಅನಂತ್, ನಾರಾಯಣ, ಸಂತೋಷ್, ವಿಜಯ್, ನಯನ, ಶ್ರೀನಿವಾಸ್, ಶಿವು, ಸಂತೋಷ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.