ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಎಂ ಇಲಾಖೆ: ಬಾಕಿ ವೇತನ ಬಿಡುಗಡೆಗೆ ಆಗ್ರಹ

ಅಂಬೇಡ್ಕರ್ ದಲಿತ ಸಮಿತಿ ಪ್ರತಿಭಟನೆ
Last Updated 30 ಸೆಪ್ಟೆಂಬರ್ 2020, 16:37 IST
ಅಕ್ಷರ ಗಾತ್ರ

ತುಮಕೂರು: ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೆ 6 ತಿಂಗಳ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಬಿಸಿಎಂ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಸಮಿತಿ ಕಾರ್ಯಕರ್ತರು ವೇತನ ಬಿಡುಗಡೆಗೆ ಕೋರಿ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಇಲಾಖೆ ವ್ಯಾಪ್ತಿಯಲ್ಲಿ 95 ವಸತಿ ನಿಲಯಗಳಿವೆ. ಇಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರು ಮತ್ತು ಕಾವಲುಗಾರರು ಸೇರಿದಂತೆ 300ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ 6 ತಿಂಗಳಿನಿಂದ ವೇತನ ನೀಡಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ನೌಕರರಿಗೆ ಇಎಸ್‍ಐ, ಪಿಎಫ್ ಸೌಲಭ್ಯ ಸಹ ನೀಡುತ್ತಿಲ್ಲ. ಕೂಡಲೇ ಬಾಕಿ ಇರುವ ವೇತನ ಬಿಡುಗಡೆಯೊಂದಿಗೆ ಈ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಕಚೇರಿ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT