ಬುಧವಾರ, ಜುಲೈ 15, 2020
22 °C
ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತೀರ್ಮಾನ: ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಕೊಬ್ಬರಿ ಬೆಲೆ ಕುಸಿತ; ನೆರವಿನ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ಕೊಬ್ಬರಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ನೆರವು ನೀಡುವ ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸಿ ತಿರ್ಮಾನಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಪ್ರಮುಖವಾಗಿ ತೆಂಗು ಬೆಳೆಯಲಾಗುತ್ತದೆ. ಕೊಬ್ಬರಿ ಬೆಲೆ ಕುಸಿದು ರೈತರು ಸಂಕಷ್ಟದಲ್ಲಿದ್ದಾರೆ. ಕೊಬ್ಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್ ಮೂಲಕ ಖರೀದಿ ಕೇಂದ್ರ ತೆರೆಯುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಜೊತೆ ಚರ್ಚಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೃಷಿ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೆ ಗ್ರಾಮೀಣ ಪ್ರದೇಶಕ್ಕೆ ತೆರಳಿ ರೈತರಿಗೆ ಸರಿಯಾದ ಮಾಹಿತಿ ನೀಡಬೇಕು. ಕೃಷಿ ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಶೀಘ್ರ ಕೃಷಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಈ ಬಗ್ಗೆ ಆದೇಶ ನೀಡಲಾಗುವುದು ಎಂದರು.

‘ಮಿಡತೆ ಬಗ್ಗೆ ಆತಂಕಪಡಬೇಕಿಲ್ಲ. ರಾಜ್ಯದ ಕಲಬುರ್ಗಿ, ಯಾದಗಿರಿ ಭಾಗಕ್ಕೆ ಮಿಡತೆ ಬರುವ ಮುನ್ಸೂಚನೆ ಇತ್ತು. ತಡೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೆವು. ಗಾಳಿ ಈಶಾನ್ಯ ದಿಕ್ಕಿಗೆ ತಿರುಗಿದ್ದು, ಮಿಡತೆಗಳೂ ಸಹ ಗಾಳಿ ಬೀಸಿದ ದಿಕ್ಕಿಗೆ ಹೋಗಿದ್ದು, ನಮ್ಮ ರೈತರಿಗೆ ಯಾವುದೇ ಭಯವಿಲ್ಲ’ ಎಂದು ತಿಳಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ದುಂಡಾರೇಣಕಪ್ಪ, ಎಪಿಎಂಸಿ ಸದಸ್ಯ ವಿ.ಟಿ.ವೆಂಕಟರಾಮಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ಅಂಜನ್ ಕುಮಾರ್, ಪ್ರಭಾಕರ್, ಮುಖಂಡರಾದ ಅರಳಿಕೆರೆ ಶಿವಯ್ಯ, ವಿ.ಬಿ.ಸುರೇಶ್, ಎಡಗಿಹಳ್ಳಿ ವಿಶ್ವನಾಥ್, ಮಂಜಣ್ಣ, ಯೋಗಾನಂದ್, ಶಿವಬಸವಯ್ಯ, ದಿನೇಶ್, ಜನಾರ್ದನ್, ರವಿ, ಶಂಕರಯ್ಯ, ವಸಂತಕುಮಾರ್, ಸಾಗರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.