ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ಮಲ್ಲನಾಯಕನಹಳ್ಳಿಯಲ್ಲಿ ಬೋನಿಗೆ ಬಿದ್ದ ಕರಡಿ

Published 24 ಜನವರಿ 2024, 11:00 IST
Last Updated 24 ಜನವರಿ 2024, 11:00 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಮಲ್ಲನಾಯಕನಹಳ್ಳಿ ಗ್ರಾಮದ ಬಳಿ ಮಂಗಳವಾರ ರಾತ್ರಿ 9 ವರ್ಷದ ಗಂಡು ಕರಡಿ ಬೋನಿಗೆ ಬಿದ್ದಿದೆ.

ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹಲವು ದಿನಗಳಿಂದ ಕರಡಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಜನರು ಓಡಾಡುವುದಕ್ಕೂ ಭಯ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ಕರಡಿ ಹಾವಳಿ ತಪ್ಪಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಅಧಿಕಾರಿಗಳು ಮಲ್ಲನಾಯಕನಹಳ್ಳಿಯ ಕೆರೆಯಲ್ಲಿ ಬೋನು ಇಟ್ಟಿದ್ದರು. ಕರಡಿ ಬೋನಿಗೆ ಬಿದ್ದಿದ್ದರಿಂದ ರೆಡ್ಡಿಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT