ತುಮಕೂರು: ಸಕಾರಣವಿಲ್ಲದೆ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ ಕುಣಿಗಲ್ ತಾಲ್ಲೂಕು ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ನಿರ್ದೇಶಕರು ನಗರದಲ್ಲಿರುವ ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಡೇರಿ ಆಡಳಿತ ಮಂಡಳಿ ನಿರ್ಣಯ ಧಿಕ್ಕರಿಸಿ, ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕ ಮಾಡಿದ ನಂತರ ಈ ರೀತಿ ಮಾಡಲಾಗಿದೆ. ಎಲ್ಲ ರೀತಿಯಲ್ಲೂ ನಿಯಮ ಪಾಲನೆಯಾಗಿದ್ದರೂ ಉದ್ದೇಶಪೂರ್ವಕವಾಗಿ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಇದಕ್ಕೆ ಕಾರಣಕರ್ತರಾದ ಸಹಕಾರ ಇಲಾಖೆ ಸಹಾಯಕ ನಿಬಂಧಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೂಪರ್ ಸೀಡ್ ಮಾಡುವ ಮುನ್ನ ಅನುಸರಿಸಬೇಕಾದ ಕಾನೂನು ಕ್ರಮಗಳನ್ನು ಪಾಲಿಸಿಲ್ಲ. ಸಂಘಕ್ಕೆ ನೋಟಿಸ್ ಸಹ ನೀಡದೆ, ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಕೂಡಲೇ ಆದೇಶ ವಾಪಸ್ ಪಡೆಯಬೇಕು. ವಯೋ ನಿವೃತ್ತಿಯಿಂದ ತೆರವಾದ ಕಾರ್ಯದರ್ಶಿ ಸ್ಥಾನಕ್ಕೆ ನಿಯಮಬದ್ಧವಾಗಿ ಮಾಡಿರುವ ನೇಮಕಕ್ಕೆ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್, ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಆಡಳಿತ ಮಂಡಳಿ ರದ್ದುಪಡಿಸಲಾಗಿದೆ. ರಾಜಕೀಯ ವ್ಯಕ್ತಿಯಂತೆ ನಡೆದುಕೊಳ್ಳುತ್ತಿರುವ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ ಆಗ್ರಹಿಸಿದರು.

ಬೇಗೂರು ಮುಖಂಡರಾದ ರಂಗಣ್ಣಗೌಡ, ಹರೀಶ್, ಹುಚ್ಚಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶೇಖರ್, ನಿರ್ದೇಶಕರಾದ ಪ್ರಕಾಶ್, ಮಹೇಶ್, ದೇವರಾಜು, ರೇಣುಕಪ್ಪ, ಸೋಮಶೇಖರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.