ತುಮಕೂರು: ಬೆಂಗಳೂರು ನಗರಕ್ಕೆ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಅದರ ಭಾಗವಾಗಿ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡಬೇಕು ಎಂಬ ಬೇಡಿಕೆ ಇದೆ’ ಎಂದರು.

ಹೊಸದಾಗಿ ಕಮಿಷನರ್ ಹುದ್ದೆ ಸೃಷ್ಟಿ, ಅದರ ಸಾಧಕ, ಬಾಧಕ, ಬೇಕಾಗುವ ಸಿಬ್ಬಂದಿ, ಖರ್ಚು ವೆಚ್ಚಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಶೀಘ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಪೊಲೀಸ್ ಅಧಿಕಾರಿ ಹಾಗೂ ಕಾನ್ಸ್ಟೆಬಲ್ಗಳ ನೇಮಕಾತಿ ಸಮಯದಲ್ಲಿ ಗರಿಷ್ಠ ವಯೋಮಿತಿ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಬ್ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸುವ ಕುರಿತು ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದ ಪ್ರಸ್ತಾವಕ್ಕೆ ಅನುಮತಿ ನೀಡಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
.ಹೈದರಾಬಾದ್ ಪೊಲೀಸ್ ಕಮಿಷನರ್ ಆಗಿ ಹುಬ್ಬಳ್ಳಿ ಮೂಲದ ವಿ.ಸಿ. ಸಜ್ಜನರ ನೇಮಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.