ತುಮಕೂರು: ಕಳೆದ ಲೋಕಸಭಾ ಚುನಾವಣೆಯಲ್ಲಿನ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾಧಿಕಾರಿ ಕೆ.ರಾಕೇಶ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಶುಭಾ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಟಿ.ಭೂಬಾಲನ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಅರಸಿ ಬಂದಿದೆ.

ಈ ಪ್ರಶಸ್ತಿಯನ್ನು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಿಂದ ಕೊಡಮಾಡಲಾಗುತ್ತಿದೆ. ಪ್ರಶಸ್ತಿಯು ಸ್ಮರಣಿಕೆ ಮತ್ತು ಪ್ರಶಂಸೆಯ ಪ್ರಮಾಣಪತ್ರ ಒಳಗೊಂಡಿದೆ.

10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಪುರಭವನದಲ್ಲಿ ಶನಿವಾರ (ಜ. 25) ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರಾಜ್ಯಪಾಲರು ಪ್ರದಾನ ಮಾಡಲಿದ್ದಾರೆ.

ಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್ ಅವರನ್ನು ಇತ್ತೀಚೆಗೆ ಬೆಳಗಾವಿಯ ಮಲಪ್ರಭಾ–ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ(ಭೂಸ್ವಾಧೀನ) ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಅದೇ ವೇಳೆಗೆ ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಂದಿತ್ತು. ಇವರನ್ನು ಅಲ್ಲಿನ ಚುನಾವಣಾ ಅಧಿಕಾರಿಯಾಗಿ ನಿಯೋಜಿಸಲಾಗಿತ್ತು. ಆ ವೇಳೆಯಲ್ಲಿನ ಕರ್ತವ್ಯ ನಿರ್ವಹಣೆಗಾಗಿಯೂ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.