ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ವಿ.ವಿಗೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Published 12 ಮಾರ್ಚ್ 2024, 3:00 IST
Last Updated 12 ಮಾರ್ಚ್ 2024, 3:00 IST
ಅಕ್ಷರ ಗಾತ್ರ

ತುಮಕೂರು: ಆಂಧ್ರಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಟಲ್ ಇನ್‍ಕ್ಯೂಬೇಶನ್ ಕೇಂದ್ರವು ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾಲಯ ಭಾಜನವಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್ ಪ್ರಶಸ್ತಿ ಪ್ರದಾನ ಮಾಡಿದರು. ವಿ.ವಿ ಕುಲಸಚಿವರಾದ ನಾಹಿದಾ ಜಮ್ ಜಮ್ ವಿ.ವಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ ನೀಡುವ ರಾಜ್ಯಮಟ್ಟದ ‘ಮಹಿಳಾ ರತ್ನ’ ಪ್ರಶಸ್ತಿಯನ್ನು ವಿ.ವಿ ಕುಲಸಚಿವರಾದ ನಾಹಿದಾ ಜಮ್ ಜಮ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಹಿಂದಿನ ವರ್ಷಗಳಲ್ಲಿ ತಹಶೀಲ್ದಾರ್ ಹಾಗೂ ವಿ.ವಿ ಕುಲಸಚಿವರಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT