ತುಮಕೂರು: ಇತ್ತೀಚೆಗೆ ಸೈಬರ್ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಯುವ ಜನರು ಎಚ್ಚರಿಕೆ ವಹಿಸಬೇಕು ಎಂದು ಸಿಐಡಿ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥ ಪ್ರಣವ್ ಮೊಹಾಂತಿ ಸಲಹೆ ಮಾಡಿದರು.

ನಗರದಲ್ಲಿ ಮಂಗಳವಾರ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಆಯೋಜಿಸಿದ್ದ ‘ಹ್ಯಾಕಥಾನ್’ಗೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್ ನಂತರ ವೈದ್ಯಕೀಯ, ಎಂಜಿನಿಯರಿಂಗ್, ನರ್ಸಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವೈದ್ಯಕೀಯ ಕ್ಷೇತ್ರವನ್ನು ಎಂಜಿನಿಯರಿಂಗ್ ಆವರಿಸಿಕೊಳ್ಳುತ್ತಿದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಶರವೇಗದಲ್ಲಿ ಬೆಳೆಯುತ್ತಿದೆ. ಈ ಪೈಪೋಟಿ ಎದುರಿಸಲು ವಿದ್ಯಾರ್ಥಿಗಳಿಗೆ ಸಮಗ್ರ ಅಧ್ಯಯನ ಅಗತ್ಯ. ವೈದ್ಯಕೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಒಂದಕ್ಕೊಂದು ಪೂರಕವಾಗಿವೆ ಎಂದರು.

ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್, ‘ಹ್ಯಾಕಥಾನ್ನಲ್ಲಿ ನೆರೆಯ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ತಂಡಗಳು ಭಾಗವಹಿಸಿವೆ. ಎಂಜಿನಿಯರಿಂಗ್ ಪದವೀಧರರು ಕೌಶಲದ ಕೊರತೆಯಿಂದ ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ’ ಎಂದು ಹೇಳಿದರು.

ತುಮಕೂರು ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸಂಪನ್ಮೂಲ ವ್ಯಕ್ತಿಗಳಾದ ಜಿತೇಶ್ ಬಜಾಜ್, ರಾಜೇಂದ್ರ ಸಾರಂಗಿ, ಶ್ರೀದೇವಿ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಆರ್.ರಮಣ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಡಾ.ಲಾವಣ್ಯ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಎಂ.ಅಂಬಿಕಾ, ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ನರೇಂದ್ರ ವಿಶ್ವನಾಥ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.