ಸೋಮವಾರ, ಸೆಪ್ಟೆಂಬರ್ 20, 2021
23 °C
ಬೈಕ್‌ ರ‍್ಯಾಲಿಯಲ್ಲಿ ವಾಲ್ಮೀಕಿ ಸಂಜಯ ಕುಮಾರ ಸ್ವಾಮೀಜಿ

ಭದ್ರಾ: ನೀರು ಹಂಚಿಕೆಯಲ್ಲಿ ಅನ್ಯಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೈ.ಎನ್.ಹೊಸಕೋಟೆ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿದರೆ ತಾಲ್ಲೂಕಿನ ಬರ ದೂರವಾಗುತ್ತದೆ ಎಂದು ವಾಲ್ಮೀಕಿ ಸಂಜಯ ಕುಮಾರ ಸ್ವಾಮೀಜಿ ಹೇಳಿದರು.

ಗ್ರಾಮದಲ್ಲಿ ಮಂಗಳವಾರ ನೇರಳಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗ ಆಯೋಜಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹಂಚಿಕೆ ಅನ್ಯಾಯದ ವಿರುದ್ಧದ ಬೈಕ್ ಜಾಥಾದಲ್ಲಿ ಅವರು ಮಾತನಾಡಿದರು.

ಪಾವಗಡ ತಾಲ್ಲೂಕು ಸದಾ ಬರಗಾಲ ಪೀಡಿತ ಪ್ರದೇಶ. ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆ ಕೈಕೊಟ್ಟರೆ ಜನರ ಬದುಕು ದುಸ್ತರವಾಗುತ್ತದೆ. ಉದ್ಯೋಗಕ್ಕಾಗಿ ಗುಳೆ ಇಲ್ಲಿ ಸಾಮಾನ್ಯವಾಗಿದೆ. ಇದನ್ನು ತಪ್ಪಿಸಲು ಸರ್ಕಾರ ಭದ್ರಾ ಮೇಲ್ಡಂಡೆ ಯೋಜನೆಯ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಯೋಜನೆ ರೂಪಿಸಿದೆ. ಆದರೆ ಆ ಯೋಜನೆಯಲ್ಲಿ ತಾಲ್ಲೂಕಿಗೆ ಅನ್ಯಾಯವಾಗಿದ್ದು, ಕೇವಲ 0.54 ಟಿಎಂಸಿ ಅಡಿ ನೀರನ್ನು ನಿಗದಿಪಡಿಸಲಾಗಿದೆ ಎಂದರು.

ತಾಲ್ಲೂಕಿನ ಹೆಚ್ಚಿನ ರೈತರಿಗೆ ಇದರಿಂದ ಅನುಕೂಲವಾಗುವುದಿಲ್ಲ. ಹಾಗಾಗಿ ಸರ್ಕಾರ ತಾಲ್ಲೂಕಿಗೆ ಕನಿಷ್ಠ 4 ಟಿಎಂಸಿ ಅಡಿ ನೀರನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದರು.

ನಾಗೇಂದ್ರ ಕುಮಾರ್ ಮಾತನಾಡಿ, ಭದ್ರಾ ಮೇಲ್ದಂಡೆ ನೀರು ಹಂಚಿಕೆ ವೇಳೆ ತಾರತಮ್ಯ ಮಾಡಲಾಗಿದೆ. ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಪಾವಗಡ ತಾಲ್ಲೂಕಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇದೆ. ಆದರೆ ಕೇವಲ 0.54 ಟಿಎಂಸಿ ಅಡಿ ನೀರು ನಿಗದಿಯಿಂದ ಅನ್ಯಾಯವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಯುವಜನರು ಹೋರಾಟ ಮಾಡಿ ಅಗತ್ಯವಿರುವಷ್ಟು ನೀರು ಪಡೆಯುವುದು ಅನಿವಾರ್ಯವಾಗಿದೆ ಎಂದರು.

ಬೈಕ್ ಜಾಥಾ ನಡೆಸಿ, ಸಹಿ ಸಂಗ್ರಹಿಸಲಾಯಿತು. ಚನ್ನಕೇಶವರೆಡ್ಡಿ, ಮಂಜುನಾಥ, ನಾಗರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.