ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ರಿಯಾಲಿಟಿ ಷೋನ 10ನೇ ಆವೃತ್ತಿಯ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
.Bigg Boss Kannada 10 | ಡ್ರೋನ್ ಪ್ರತಾಪ್ ರೊಟ್ಟಿ ಪ್ರತಾಪ್ ಆದ್ರಾ?.
ಮಧುಗಿರಿ ತಾಲ್ಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದ ನೀರಿನಲ್ಲಿ ಸೋಡಿಯಂ ಬಳಸಿ ಸ್ಫೋಟ ನಡೆಸಿದ್ದರು. ನೀರಿಗೆ ಸೋಡಿಯಂ ಬೆರೆತಾಗ ಹೇಗೆ ಸ್ಫೋಟಗೊಳ್ಳುತ್ತದೆ ಎನ್ನುವ ಪ್ರಯೋಗ ಮಾಡಿದ್ದರು. ನೀರಿಗೆ ಸೋಡಿಯಂ ಮೆಟಲ್ ಎಸೆದಾಗ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿತ್ತು. ಡ್ರೋನ್ ಪ್ರತಾಪ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಭಾರತೀಯ ದಂಡ ಸಂಹಿತೆ ಸೆಕ್ಷನ್ 288 ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿ ಡ್ರೋನ್ ಪ್ರತಾಪ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
.ಡ್ರೋನ್ ಪ್ರತಾಪ್ ವಿರುದ್ಧ ಎಫ್ಐಆರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.