ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು

Last Updated 24 ಮಾರ್ಚ್ 2023, 6:56 IST
ಅಕ್ಷರ ಗಾತ್ರ

ಗುಬ್ಬಿ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಪಟ್ಟಣದ ಹೊರ ವಲಯದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗದ ಚೇಳೂರು ರಸ್ತೆಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದೆ.


ಸಿ.ಎಸ್.ಪುರ ಹೋಬಳಿ ರಾಗಿಮುದ್ದನಹಳ್ಳಿ ಗ್ರಾಮದ ಚೆಲುವರಾಜು (40) ಹಾಗೂ ಹೊನವಳ್ಳಿಯ ಅಭಿಷೇಕ್ (19) ಮೃತಪಟ್ಟವರು. ಚೆಲುವರಾಜು ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಅಭಿಷೇಕ್ ಸಾವನ್ನಪ್ಪಿದ್ದಾರೆ. ಜಿ.ಎಸ್.ಪಾಳ್ಯದ ಯೂಸುಫ್ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಮೃತ ಚೆಲುವರಾಜು ಹಾಗೂ ಯೂಸುಫ್ ಚೇಳೂರು ಕಡೆಯಿಂದ ಹಾಗೂ ಅಭಿಷೇಕ್ ಗುಬ್ಬಿ ಕಡೆಯಿಂದ ಹೊನವಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT