ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣದ ಮಾರುತಿ ನಗರದ ಬಳಿ ಭಾನುವಾರ ಬೈಕ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ರಮೇಶ್ (46) ಎಂಬುವರು ಮೃತಪಟ್ಟಿದ್ದಾರೆ.
ಬುಕ್ಕಾಪಟ್ಟಣ ಗ್ರಾಮದ ರಮೇಶ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಮಯದಲ್ಲಿ ಶಿರಾ ಕಡೆಯಿಂದ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ರಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬುಕ್ಕಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.