ತುಮಕೂರು: ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಪೂರಕವಾದ ನೀತಿ ರೂಪಿಸುವಂತೆ ಒತ್ತಾಯಿಸಿ ಬೈಕ್ ಟ್ಯಾಕ್ಸಿ ಚಾಲಕರು ತಾಲ್ಲೂಕಿನ ಮಂದರಗಿರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಬೈಕ್ ಟ್ಯಾಕ್ಸಿ ನಿಷೇಧದಿಂದ ದೈನಂದಿನ ಜೀವನಕ್ಕೆ ತೊಂದರೆಯಾಗಿದೆ. ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಬೀದಿಗೆ ಬಂದಿದ್ದಾರೆ. ಇದು ನಮ್ಮ ಅಳಿವು–ಉಳಿವಿನ ಪ್ರಶ್ನೆ. ಜೀವನ ಸಾಗಿಸಲು ಪರ್ಯಾಯ ಕೆಲಸವಿಲ್ಲದೆ ಸಮಸ್ಯೆಯಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡರು.

‘ಬೈಕ್ ಟ್ಯಾಕ್ಸಿಗಳು ಸಾರಿಗೆ ವ್ಯವಸ್ಥೆಯ ಭಾಗವಾಗಿವೆ. ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿವೆ. ದೇಶದ 19 ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ಚಾಲ್ತಿಯಲ್ಲಿದ್ದು, ಪ್ರತ್ಯೇಕ ನೀತಿ ರೂಪಿಸಲಾಗಿದೆ. ರಾಜ್ಯದಲ್ಲಿಯೂ ಸರಿಯಾದ ನಿಯಮ ರೂಪಿಸಬೇಕು’ ಎಂದು ಚಾಲಕ ರಮೇಶ್ ಒತ್ತಾಯಿಸಿದರು.

ಉದ್ಯೋಗವಿಲ್ಲದೆ ದಿನ ಬಳಕೆ ವಸ್ತು ಖರೀದಿಸಲು ಶಕ್ತಿ ಇಲ್ಲದಂತಾಗಿದೆ. ಮಕ್ಕಳ ಶಾಲಾ ಶುಲ್ಕ ಪಾವತಿಯೂ ಕಷ್ಟವಾಗುತ್ತಿದೆ. ಹೀಗಾದರೆ ಬದುಕು ಸಾಗಿಸುವುದು ಹೇಗೆ? ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.