ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ‘ಬಿರಿಯಾನಿ ಹೌಸ್‌’ನಲ್ಲಿ ಬೆಂಕಿ: ಅಪಾರ ಹಾನಿ

Published 25 ಏಪ್ರಿಲ್ 2024, 14:17 IST
Last Updated 25 ಏಪ್ರಿಲ್ 2024, 14:17 IST
ಅಕ್ಷರ ಗಾತ್ರ

ತುಮಕೂರು: ನಗರದ ಗಂಗೋತ್ರಿ ರಸ್ತೆಯಲ್ಲಿರುವ ‘ಬಿರಿಯಾನಿ ಹೌಸ್‌’ ಮಳಿಗೆಯಲ್ಲಿ ಗುರುವಾರ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ನಷ್ಟವಾಗಿದೆ.

ಮಳಿಗೆಯ ನೆಲ ಮಹಡಿಯಲ್ಲಿದ್ದ ಸಾಮಗ್ರಿಗಳು ಬೆಂಕಿಗೆ ಸುಟ್ಟು ಹೋಗಿವೆ. 2 ಕೂಲರ್‌, ಇತರೆ ಪರಿಕರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಆದಿ ನಾನ್ ಅಖಿಲ್‌ ಎಂಬುವರು ಹಲವು ವರ್ಷಗಳಿಂದ ಬಿರಿಯಾನಿ ಮಳಿಗೆ ನಡೆಸುತ್ತಿದ್ದರು. ಮಳಿಗೆಯಲ್ಲಿ ಸಿಬ್ಬಂದಿ ಕೆಲಸ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರು ಮಳಿಗೆಯಿಂದ ಹೊರಗಡೆ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ವಿಷಯ ತಿಳಿದ ಕೂಡಲೇ ಮಳಿಗೆಯ ಬಳಿ ಹೆಚ್ಚಿನ ಜನ ಸಂದಣಿ ಸೇರಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT