ಮಂಗಳವಾರ, ಆಗಸ್ಟ್ 11, 2020
24 °C

ಶಿವಕುಮಾರ ಶ್ರೀಗಳ ಭಾವಚಿತ್ರ; ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಗರದಲ್ಲಿ ಮಂಗಳವಾರ ನಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋನಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತು. ಅಮಿತ್ ಶಾ ಅವರ ಈ ನಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟೌನ್‌ಹಾಲ್‌ ವೃತ್ತದಿಂದ ಹೊರಟ ರೋಡ್‌ ಶೋ ಎಂ.ಜಿ.ರಸ್ತೆ ಪ್ರವೇಶಿಸಿತು. ಈ ವೇಳೆ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರವನ್ನು ಅಮಿತ್‌ ಶಾ ಅವರು ಕಾರ್ಯಕರ್ತರಿಗೆ ತೋರಿಸಿದರು. 

ಸ್ವಾಮೀಜಿ ಅವರು ಜಾತ್ಯತೀತ ಮತ್ತು ರಾಜಕೀಯೇತರ ವ್ಯಕ್ತಿ ಆಗಿದ್ದರು. ಅವರ ಭಾವಚಿತ್ರವನ್ನು ಚುನಾವಣಾ ಪ್ರಚಾರ ಸಭೆಯಲ್ಲಿ ತೋರಿಸುವ ಮೂಲಕ ಅಮಿತ್ ಶಾ ಏನನ್ನು ಹೇಳಲು ಹೊರಟಿದ್ದಾರೆ. ಇದು ಅಕ್ಷಮ್ಯ. ಇಡೀ ಜಿಲ್ಲೆಯ ಜಾತ್ಯತೀತ ಪರಂಪರೆಗೆ ಮಾಡಿದ ಅವಮಾನ ಎಂದು ಆಕ್ಷೇಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು