ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಷ್ಟಾಚಾರ ಉಲ್ಲಂಘನೆ; ಬಿಜೆಪಿ ಪ್ರತಿಭಟನೆ

Last Updated 7 ಜೂನ್ 2019, 12:48 IST
ಅಕ್ಷರ ಗಾತ್ರ

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಫ್ಲೆಕ್ಸ್‌ಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಸಂಸದ ಜಿ.ಎಸ್.ಬಸವರಾಜು ಅವರ ಭಾವಚಿತ್ರಗಳನ್ನು ಹಾಕಿಲ್ಲ. ಇದು ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಎಂ.ಜಿ ಕ್ರೀಡಾಂಗಣದ ಬಳಿ ಪ್ರತಿಭಟನೆ ನಡೆಸಿದರು.

ಜಿ.ಬಿ.ಜ್ಯೋತಿಗಣೇಶ್ ನೇತೃತ್ವದಲ್ಲಿ ಕ್ರೀಡಾಂಗಣದ ಮುಂದಿನ ರಸ್ತೆಯಲ್ಲಿ ಕುಳಿತ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್, ತುಮಕೂರು ಸ್ಮಾರ್ಟ್ ಸಿಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಮುಖಂಡರು ಮತ್ತು ಕಾರ್ಯಕರ್ತರ ಮನವೊಲಿಸಿದರು.

ಪ್ರತಿಭಟನೆಯ ನಂತರ ಎಚ್ಚೆತ್ತ ಅಧಿಕಾರಿಗಳು ಸಂಸದ ಜಿ.ಎಸ್.ಬಸವರಾಜು ಅವರ ಭಾವಚಿತ್ರವನ್ನು ಅಳವಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ‘ಫ್ಲೆಕ್ಸ್‌ಗಳಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಹಾಕದೇ ಇರುವುದರಲ್ಲಿ ಸ್ವಲ್ಪ ಆಚಾತುರ್ಯವಾಗಿದೆ. ಇದು ಉದ್ದೇಶಪೂರ್ವಕವಲ್ಲ. ಇದಕ್ಕೆ ವಿಷಾದಿಸುತ್ತೇನೆ. ಮುಂದಿನ ದಿನಗಳಲ್ಲಿಈ ರೀತಿ ಆಗುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT