ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿಗೆ ಸರಳ ಬಹುಮತ : ವಿ.ಸೋಮಣ್ಣ ವಿಶ್ವಾಸ

Last Updated 28 ಆಗಸ್ಟ್ 2018, 12:03 IST
ಅಕ್ಷರ ಗಾತ್ರ

ತುಮಕೂರು: ‘ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ನಾಗರಿಕರಿಗೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು’ ಎಂದು ಶಾಸಕ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಿಜೆಪಿ ಉಸ್ತುವಾರಿ ವಿ.ಸೋಮಣ್ಣ ತಿಳಿಸಿದರು.

ಮಂಗಳವಾರ ಮಹಾನಗರ ಪಾಲಿಕೆಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪಾಲಿಕೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆಯುವುದು ಖಚಿತ. ನಗರದ ಜನರು ಬದಲಾವಣೆ ಬಯಸುತ್ತಿದ್ದಾರೆ. ಆದ್ದರಿಂದ ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿರುವುದು ತುಮಕೂರಿಗೆ ಮಾತ್ರ. ಆದ್ದರಿಂದ ಬೆಂಗಳೂರಿಗೆ ಬರುವ ಸಾಫ್ಟ್‌ವೇರ್ ಕಂಪೆನಿಗಳನ್ನು ತುಮಕೂರಿಗೆ ತರುವ ಮಹತ್ವ ಆಲೋಚನೆ ನಮ್ಮ ಮುಂದಿದೆ. ಅಲ್ಲದೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ಮತ್ತು ಗುಬ್ಬಿಯ ಎಚ್‌ಎಎಲ್‌ ಅಗತ್ಯಕ್ಕೆ ತಕ್ಕಂತೆ ಸ್ಯಾಟಲೈಟ್ ಟೌನ್ ನಿರ್ಮಾಣದ ಚಿಂತನೆಯೂ ಇದೆ ಎಂದು ಮಾಹಿತಿ ನೀಡಿದರು.

ಸಣ್ಣ ಪುಟ್ಟ ಭಿನ್ನಾಭಿಪ್ರಾಯ: ಹಿರಿಯ ಮುಖಂಡ ಸೊಗಡು ಶಿವಣ್ಣ ಪಕ್ಷದ ಶಿಸ್ತಿನ ಸಿಪಾಯಿ. ಅವರ ಜತೆ ನಾನು ದೂರವಾಣಿಯಲ್ಲಿ ಮಾತನಾಡಿದೆ. ಆದರೆ ಅವರು ನೇರವಾಗಿ ಸಿಕ್ಕಿಲ್ಲ. ಅವರ ಜತೆ ಮಾತುಕತೆ ನಡೆಸುವೆ ಎಂದು ಹೇಳಿದರು.

‘ಕಾರ್ಪೊರೇಷನ್ ಚುನಾವಣೆಯಲ್ಲಿ ಹಣ ಪಡೆದು ಟಿಕೆಟ್ ನೀಡುವಷ್ಟು ಸಣ್ಣ ಮಟ್ಟಕ್ಕೆ ಪಕ್ಷ ಮತ್ತು ಮುಖಂಡರು ಇಳಿದಿಲ್ಲ. ಎಲ್ಲ ಸಣ್ಣ ಪುಟ್ಟ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದು ಬಗೆಹರಿಸಲಾಗುವುದು’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT