ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದ್ವಿಚಕ್ರ ವಾಹನಕ್ಕೆ‌ ಹಗ್ಗ ಕಟ್ಟಿ ಎಳೆದು ಖಂಡನೆ

Published 20 ಜೂನ್ 2024, 14:05 IST
Last Updated 20 ಜೂನ್ 2024, 14:05 IST
ಅಕ್ಷರ ಗಾತ್ರ

ಶಿರಾ: ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರ ಬದುಕನ್ನು ದುಸ್ತರಗೊಳಿಸುತ್ತಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಕಾಂಗ್ರೆಸ್ ನಿತ್ಯ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ ಎಂದರು.

ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಮುಗಿದ ತಕ್ಷಣ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸುವ ಮೂಲಕ ಜನವಿರೋಧಿ ನಿಲುವು ತೋರಿದೆ. ಸರ್ಕಾರದ ಈ ಕ್ರಮದಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದ್ದು ಬಡಜನತೆ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ಬೆಲೆ ಏರಿಕೆ ಕೈಬಿಡಬೇಕು ಎಂದರು.

ಪ್ರವಾಸಿ ಮಂದಿರದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ವ್ಯಕ್ತಪಡಿಸಿದರು. ದ್ವಿಚಕ್ರ ವಾಹನಕ್ಕೆ‌ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.

ಶಿರಾದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು
ಶಿರಾದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು

ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ನಗರ ಮಂಡಲ ಅಧ್ಯಕ್ಷ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚಿಕ್ಕಣ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ಲಲಿತಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂಜಲಗೆರೆ ಮೂರ್ತಿ, ಶ್ರೀನಿವಾಸ್, ತರೂರು ಬಸವರಾಜು, ಬುಕ್ಕಾಪಟ್ಟಣ ಮಂಜುನಾಥ್, ರಂಗಸ್ವಾಮಿ, ಕದಿರೇಹಳ್ಳಿ ಮೂರ್ತಿ, ಪದ್ಮ ಮಂಜುನಾಥ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT