ಬುಧವಾರ, ಏಪ್ರಿಲ್ 14, 2021
31 °C

ಹತ್ತು ವರ್ಷಗಳ ನಂತರ ತುಮಕೂರು ಪಾಲಿಕೆಯಲ್ಲಿ ಅಧಿಕಾರ ಹಿಡಿದ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ತುಮಕೂರು: ಹತ್ತು ವರ್ಷಗಳ ನಂತರ ತುಮಕೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಯಿತು.

ಶುಕ್ರವಾರ ನಡೆದ ಚುನಾವಣೆಯಲ್ಲಿ ಪಾಲಿಕೆ ಮೇಯರ್ ಆಗಿ ಬಿಜೆಪಿಯ ಬಿ.ಜಿ. ಕೃಷ್ಣಪ್ಪ, ಉಪಮೇಯರ್‌ ಆಗಿ ಜೆಡಿಎಸ್‌ನ ನಾಜೀಮಾಬಿ ಅವರು ಅವಿರೋಧವಾಗಿ ಆಯ್ಕೆಯಾದರು.

ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತವಿರಲಿಲ್ಲ. ಹಿಂದಿನ ಬಾರಿ ಕಾಂಗ್ರೆಸ್– ಜೆಡಿಎಸ್ ಒಟ್ಟಾಗಿ ಅಧಿಕಾರ ಹಂಚಿಕೊಂಡು ಅಧಿಕಾರ ಹಿಡಿದಿದ್ದವು. ಆದರೆ ಈ ಬಾರಿ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆ ಸದಸ್ಯರಲ್ಲಿ ಬಿಜೆಪಿಯ ಕೃಷ್ಣಪ್ಪ ಅವರೊಬ್ಬರೇ ಪರಿಶಿಷ್ಟ ಪಂಗಡದ ಮೀಸಲಾತಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಏಕೈಕ ಸದಸ್ಯ.

ಕಾಂಗ್ರೆಸ್– ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರೂ ಎಸ್‌ಟಿ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಸದಸ್ಯರು ಇರಲಿಲ್ಲ. ಹಾಗಾಗಿ ಬಿಜೆಪಿಗೆ ಅಧಿಕಾರದ ಅದೃಷ್ಟ ಒಲಿದು ಬಂತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು