ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸರ್ಕಾರ ಉರುಳಿಸಲು ಬಿಜೆಪಿ ಕುತಂತ್ರ’

Published 21 ಆಗಸ್ಟ್ 2024, 5:29 IST
Last Updated 21 ಆಗಸ್ಟ್ 2024, 5:29 IST
ಅಕ್ಷರ ಗಾತ್ರ

ತುಮಕೂರು: ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ಕುತಂತ್ರ ನಡೆಸುತ್ತಿದೆ. ಜನರ ಆಶೀರ್ವಾದದಿಂದ ಅಸ್ತಿತ್ವಕ್ಕೆ ಬಂದಿರುವ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಹೇಳಿದರು.

ನಗರದಲ್ಲಿ ಮಂಗಳವಾರ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ವಿಭಾಗದಿಂದ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು, ರಾಜೀವ್ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ನ್ಯಾಯಯುತವಾಗಿಲ್ಲ. ಆ. 29ರ ನ್ಯಾಯಾಲಯದ ತೀರ್ಪು ಆಧರಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್‌ ಹಾಲಪ್ಪ, ‘ದೇವರಾಜ ಅರಸು ಧ್ವನಿ ಇಲ್ಲದ ಸಮುದಾಯಗಳಿಗೆ ಶಕ್ತಿ ತುಂಬಿದರು’ ಎಂದು ಹೇಳಿದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿ.ಎಚ್.ಅನಿಲ್‍ಕುಮಾರ್‌, ಮುಖಂಡರಾದ ಕೆಂಚಮಾರಯ್ಯ, ಸಿದ್ಧಲಿಂಗೇಗೌಡ, ರೇವಣ್ಣಸಿದ್ದಯ್ಯ, ಪಿ.ಶಿವಾಜಿ, ಷಣ್ಮುಖಪ್ಪ, ಕೆಂಪರಾಜು, ಟಿ.ಆರ್.ಸುರೇಶ್, ಕೆಂಪಣ್ಣ, ನ್ಯಾತೇಗೌಡ, ಜಿಯಾ, ನಾಗಮಣಿ, ಭಾಗ್ಯಮ್ಮ, ವಿಜಯಲಕ್ಷ್ಮಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT