ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | 'ಪರಮೇಶ್ವರ ರಾಜೀನಾಮೆಗೆ ಆಗ್ರಹ'

Published 16 ಮೇ 2024, 14:30 IST
Last Updated 16 ಮೇ 2024, 14:30 IST
ಅಕ್ಷರ ಗಾತ್ರ

ತುಮಕೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಅಸಮರ್ಥರಾಗಿರುವ ಗೃಹ ಸಚಿವ ಜಿ.ಪರಮೇಶ್ವರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಪ್ರತಿಯೊಂದು ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಮತಬ್ಯಾಂಕ್‌ ರಕ್ಷಿಸಿಕೊಳ್ಳಲು ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್‌.ರವಿಶಂಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಅಂಕಿ–ಅಂಶಗಳ ಪ್ರಕಾರ ಕಳೆದ 11 ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಶೇ 60ಕ್ಕಿಂತ ಹೆಚ್ಚಾಗಿದೆ. ಮಹಿಳೆಯರ ಮೇಲಿನ ಅಮಾನುಷ ಕೃತ್ಯಗಳು ಜಾಸ್ತಿಯಾಗಿವೆ. ಇದಕ್ಕೆ ರಾಜ್ಯ ಸರ್ಕಾರವೇ ಕಾರಣ. ಸರ್ಕಾರ ದೃಢ ನಿರ್ಧಾರ, ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಪದೇ ಪದೇ ಇಂತಹ ಘಟನೆಗಳು ವರದಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

‘ಹುಬ್ಬಳ್ಳಿಯ ಅಂಜಲಿ, ನೇಹಾ ಹತ್ಯೆ ಸೇರಿದಂತೆ ಅನೇಕ ಪ್ರಕರಣ ನಡೆದಿವೆ. ಮತಾಂಧ ಶಕ್ತಿಗಳು ವಿಜೃಂಭಿಸುತ್ತಿವೆ. ಕಾಂಗ್ರೆಸ್‌ ಕೈಯಲ್ಲಿ ರಾಜ್ಯ ಸುರಕ್ಷಿತವಾಗಿಲ್ಲ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT