ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷ ನಂತರ ಬಿಜೆಪಿ ಮತ್ತೆ ಅಧಿಕಾರಕ್ಕೆ: ಚಿದಾನಂದ ಎಂ.ಗೌಡ

Published 21 ನವೆಂಬರ್ 2023, 5:01 IST
Last Updated 21 ನವೆಂಬರ್ 2023, 5:01 IST
ಅಕ್ಷರ ಗಾತ್ರ

ಮಧುಗಿರಿ: ಎರಡು ವರ್ಷ ಕಳೆದ ನಂತರ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲುವ ಮೂಲಕ ಮತ್ತೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಬಿಜೆಪಿ ಅಭ್ಯರ್ಥಿಯಾಗಲಿದ್ದು ಅವರನ್ನು ಮತ್ತೆ ಗೆಲ್ಲಿಸಬೇಕೆಂದು ಶಿಕ್ಷಕರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT