ಗುರುವಾರ , ಏಪ್ರಿಲ್ 22, 2021
22 °C
ಮಾಜಿ ಶಾಸಕ ಸುರೇಶ್‌ ಗೌಡ ಮೇಲೆ ಶಾಸಕ ಡಿ.ಸಿ.ಗೌರಿಶಂಕರ್‌ ಆರೋಪ

ಬಡವರ ಭೂಮಿ ಅಧಿಕಾರಿಗಳ ಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಮಾಜಿ ಶಾಸಕ ಬಿ.ಸುರೇಶ್ ಗೌಡ ಜೊತೆ ಸೇರಿ ಸರ್ಕಾರಿ ಅಧಿಕಾರಿಗಳು ಬಡವರಿಗೆ ಹಂಚಬೇಕಾಗಿದ್ದ ಭೂಮಿಯನ್ನು ಶ್ರೀಮಂತರಿಗೆ ಹಂಚಿದ್ದಾರೆ. ಕೋಟ್ಯಂತರ ರೂಪಾಯಿ ಕಬಳಿಸಿರುವ ತಹಶೀಲ್ದಾರ್ ನಾಗರಾಜು ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಾಸಕ ಡಿ.ಸಿ.ಗೌರಿಶಂಕರ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಭೇಟಿ ಮಾಡಿ ತಹಶೀಲ್ದಾರ್ ನಾಗರಾಜು ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

 ಗೌರಿಶಂಕರ್ ಮಾತನಾಡಿ, ‘ಲೋಕಸಭಾ ಚುನಾವಣೆ ಇನ್ನು ನಾಲ್ಕು ದಿನ‌ ಇರುವಾಗ ಈ ಅವ್ಯವಹಾರಗಳು ನಡೆದಿದೆ. ಈ ಅವ್ಯವಹಾರವನ್ನು ತನಿಖೆ ಮಾಡುವಂತೆ ಎಸಿಬಿ, ಲೋಕಾಯುಕ್ತ, ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.