ಬಿಜೆಪಿ ದ್ವೇಷದ ರಾಜಕಾರಣ ಸಾಬೀತು

7

ಬಿಜೆಪಿ ದ್ವೇಷದ ರಾಜಕಾರಣ ಸಾಬೀತು

Published:
Updated:

ತುಮಕೂರು: ‘ಯಡಿಯೂರಪ್ಪ ಅವರು ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯುವ ಮೂಲಕ  ಬಿಜೆಪಿಯ ದ್ವೇಷದ ರಾಜಕಾರಣವನ್ನು ದೃಢಪಡಿಸಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ಚರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದಲ್ಲಿ ಎಲ್ಲೆಲ್ಲಿ ಬೇರೆ ಪಕ್ಷಗಳು ಆಡಳಿತ ನಡೆಸುತ್ತಿವೆ ಆ ಸರ್ಕಾರ, ಪಕ್ಷಗಳ ಮುಖಂಡರ ವಿರುದ್ಧ ದ್ವೇಷದ ರಾಜಕಾರಣವನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ, ಬಿಜೆಪಿ ಮುಖಂಡರು ಮಾಡಿಕೊಂಡು ಬಂದಿದ್ದಾರೆ ಎಂದು ನಾವು ಅನೇಕ ಬಾರಿ ಹೇಳಿಕೊಂಡು ಬಂದಿದ್ದೇವೆ. ಅದನ್ನೇ ಮುಂದುವರಿಸಿದ್ದಾರೆ ಎಂದು ಟೀಕಿಸಿದರು.

’ಇದು ರಾಜಕೀಯ ಷಡ್ಯಂತ್ರ  ಅಲ್ಲದೇ ಬೇರೇನೂ ಇಲ್ಲ’ ಎಂದು ಹೇಳಿದರು.

’ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಸೆ.10 ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷವೂ ಈ ಬಂದ್ ಗೆ ಬೆಂಬಲಿಸುತ್ತಿದೆ’ ಎಂದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !