ತುಮಕೂರು: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ನಗರದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ದಲಿತರು, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಕೃತ್ಯಗಳನ್ನು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಬರದ ಮಧ್ಯೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರುತ್ತಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದ ದಲಿತ ಮಹಿಳೆಯನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ. ಮಹಿಳೆಗೆ ರಕ್ಷಣೆ, ನ್ಯಾಯ ಒದಗಿಸುವ ವಿಷಯದಲ್ಲಿ ಕಾಂಗ್ರೆಸ್ ನಾಯಕರು ನಾಟಕೀಯವಾಗಿ ನಡೆದುಕೊಂಡರು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ದೂರಿದರು.

ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಹೊಸ ಕಾನೂನು ರೂಪಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಈವರೆಗೆ ಕೆಲವರನ್ನು ಮಾತ್ರ ಬಂಧಿಸಲಾಗಿದೆ. ಪ್ರಕರಣದ ಗಂಭೀರತೆ ಅರಿತು ಸಮಗ್ರ ತನಿಖೆ ಮಾಡಿಲ್ಲ. ಕಾಟಾಚಾರಕ್ಕೆ ತನಿಖೆ ನಡೆಸಲಾಗಿದೆ ಎಂದು ಟೀಕಿಸಿದರು.

ರೈತರು ಸಹಕಾರ ಸಂಘಗಳಲ್ಲಿ ಪಡೆದ ಸಾಲ ಮರು ಪಾವತಿ ಮಾಡಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸುವ ಮೂಲಕ ರೈತರಿಗೆ ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ. ಭೀಕರ ಬರ ಪರಿಸ್ಥಿತಿಯಲ್ಲಿ ರೈತರು ಸಾಲ ತೀರಿಸಲಾಗದೆ ಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಡಾ.ಎಂ.ಆರ್.ಹುಲಿನಾಯ್ಕರ್, ಎಚ್.ಟಿ.ಭೈರಪ್ಪ, ಗಂಗರಾಜು, ಟಿ.ಆರ್.ಸದಾಶಿವಯ್ಯ, ಸತ್ಯಮಂಗಲ ಜಗದೀಶ್, ಚಂದ್ರಶೇಖರ್, ಡಿ.ಆರ್.ಬಸವರಾಜು, ರುದ್ರೇಶ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.