ಕುಣಿಗಲ್: ರಾಜ್ಯ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ತುಮುಲ್ ನಿರ್ದೇಶಕ ಡಿ.ಕೃಷ್ಣಕುಮಾರ್ ಮಾತನಾಡಿ, ಮುಖ್ಯಮಂತ್ರಿ ಹುದ್ದೆಗಾಗಿ ಕಿತ್ತಾಡುತ್ತಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮರೆತಿದ್ದಾರೆ. ಕೃಷಿ ಬಗ್ಗೆ ಜ್ಞಾನವಿಲ್ಲದ ಕೃಷಿ ಸಚಿವ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. ಶಾಸಕ ಡಾ.ರಂಗನಾಥ ಲಿಂಕ್ ಕೆನಾಲ್ ಜಪ ಮಾಡುತ್ತಿದ್ದು, ತಮ್ಮ ಸಂಬಂದಿಯನ್ನು ಮುಖ್ಯಮಂತ್ರಿ ಮಾಡಲು ಪೂಜೆ ಮಾಡುತ್ತಾ ಕಾಲಾಹರಣ ಮಾಡುತ್ತಿದ್ದಾರೆ. ತೆಂಗು, ಅಡಿಕೆಗೆ ರೋಗ ಹೆಚ್ಚಾಗುತ್ತಿದೆ. ಅಧಿಕಾರಿಗಳೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ಯಾಟರಂಗೇಗೌಡ ಮಾತನಾಡಿ, ತಾಲ್ಲೂಕಿನ ಶಾಸಕರು ಪ್ರಭಾವಿಯಾಗಿದ್ದಾರೆ. ಆದರೂ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರ್ಕಾರಿ ಸೌಲಭ್ಯ ವಿತರಣೆಯಲ್ಲಿ ವಿಫಲರಾಗಿದ್ದಾರೆ. ಲಿಂಕ್ ಕೆನಾಲ್ ಜಪ ಮಾಡುತ್ತಿರುವ ಶಾಸಕರು ತಾಲ್ಲೂಕಿನ ಎಷ್ಟು ಕೆರೆಗಳಿಗೆ ನೀರು ಹರಿಸಿದ್ದೀರಿ ದಾಖಲೆ ನೀಡಿ. ಎರಡು ಲಕ್ಷ ಹೆಕ್ಟೇರ್ ಪ್ರದೇಶದ ತೆಂಗು ಬೆಳೆ ರೋಗಕ್ಕೆ ತುತ್ತಾಗಿದೆ. ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೆ ಶಾಸಕರ ಜತೆ ಓಡಾಡುತ್ತಿದ್ದಾರೆ ಎಂದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೊಡಿಗೆಹಳ್ಳಿ ದಿನೇಶ್ ಕುಮಾರ್, ಕೃಷಿ ಸಹಾಯಕ ನಿರ್ದೇಶಕ ರಂಗನಾಥ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ತಾಲ್ಲೂಕಿನಲ್ಲಿ ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಒಬ್ಬ ವ್ಯಾಪಾರಿಯೂ ದರಪಟ್ಟಿ ಪ್ರಕಟಿಸಿಲ್ಲ. ರಸಗೊಬ್ಬರ ಮಾರಾಟಗಾರರೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ರೈತರನ್ನು ಶೋಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಅಧ್ಯಕ್ಷ ಕೆ.ಎಸ್.ಬಲರಾಂ, ರೈತ ಮೋರ್ಚ ಅಧ್ಯಕ್ಷ ಆನಂದ್ ಸ್ವಾಮಿ, ಎಸ್.ಸಿ. ಮೋರ್ಚ ಅಧ್ಯಕ್ಷ ಸುರೇಶ್, ಪುರಸಭೆ ಮಾಜಿ ಸದಸ್ಯ ಕೃಷ್ಣ ಪಾಲ್ಗೊಂಡಿದ್ದರು.