ಶಿರಾ: ಜಾತಿ ಗಣತಿಯನ್ನು ಬಿಜೆಪಿ ಎಂದೂ ವಿರೋಧ ಮಾಡುವುದಿಲ್ಲ. ಆದರೆ, ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಆಶೋಕ ಟೀಕಿಸಿದ್ದಾರೆ.

ಕಳೆದ ಬಾರಿ ಅಧಿಕಾರದಲ್ಲಿದ್ದಾಗ ಲಿಂಗಾಯತ, ವೀರಶೈವ ಎಂದು ಜಾತಿ ಒಡೆಯುವ ಕೆಲಸ ಮಾಡಿದ್ದ ಸಿದ್ದರಾಮಯ್ಯ ಈ ಬಾರಿ ಜಾತಿ, ಜಾತಿಗಳನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕಿನ ದೇವರಹಳ್ಳಿಯಲ್ಲಿ ಭಾನುವಾರ ಬರ ಅಧ್ಯಯನ ನಡೆಸಿದ ಬಳಿಕ ಅವರು ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅವರ ಸಂಪುಟದ ಸದಸ್ಯರೇ ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಈಗಾಗಲೇ ಸೋರಿಕೆಯಾಗಿದ್ದು, ಅವೈಜ್ಞಾನಿಕವಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಟ್ಟ ಸಂಪ್ರದಾಯ ಆರಂಭಿಸಿದೆ. ಸಂಪುಟ ಸಭೆಯನ್ನು ದುರುಪಯೋಗ ಮಾಡಿಕೊಂಡಿದೆ ಎಂದು ತರಾಟೆಗೆ ತೆಗೆದುಕೊಂಡರು.

ಈ ಹಿಂದೆ ಲೋಕಾಯುಕ್ತ ಸಂಸ್ಥೆ ರದ್ದು ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ತಳಪಾಯ ಹಾಕಿದ ಭ್ರಷ್ಟಾಚಾರದ ರಾಯಭಾರಿ ಸಿದ್ದರಾಮಯ್ಯ, ಈಗ ಸಿಬಿಐ ತನಿಖೆ ರದ್ದುಪಡಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ ಎಂದು ಆಶೋಕ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.