ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ ಶಿಬಿರ: 25 ಯೂನಿಟ್‌ ರಕ್ತ ಸಂಗ್ರಹ

Published 13 ಅಕ್ಟೋಬರ್ 2023, 16:23 IST
Last Updated 13 ಅಕ್ಟೋಬರ್ 2023, 16:23 IST
ಅಕ್ಷರ ಗಾತ್ರ

ಹುಳಿಯಾರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು. ಅನೇಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ನೌಕಕರು ಸೇರಿದಂತೆ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯ ಮಹಮದ್ ಶೇಖ್‌ ಕಾರ್ಯಕ್ರಮ ಉದ್ಘಾಟಿಸಿ, ರಕ್ತದಾನದ ಮಹತ್ವ ಮತ್ತು ಉಪಯೋಗ, ರಕ್ತದ ಅವಶ್ಯಕತೆ ಪೂರೈಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕೃಷ್ಣ, ಆಯುಷ್ ವೈದ್ಯೆ ಚಂದನಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ವಿ.ವೆಂಕಟರಾಮಯ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ರೇಣುಕಾ ರಾಜು, ಆರೋಗ್ಯ ಸುರಕ್ಷತಾಧಿಕಾರಿಗಳಾದ ವೀಣಾ ಮತ್ತು ಮಧು ಸಮುದಾಯ ಆರೋಗ್ಯ ಅಧಿಕಾರಿ ಲಾವಣ್ಯ, ಅಶ್ವಿನಿ ಮತ್ತು ಯಾಸ್ಮಿನ್ ಭಾನು, ಶುಶ್ರೂಷಣಾಧಿಕಾರಿ ಚೇತನ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಚಿಕ್ಕನಾಯಕನಹಳ್ಳಿ ಆಸ್ಪತ್ರೆಯ ನಯಾಜ್, ಜಿಲ್ಲಾ ರಕ್ತ ನಿಧಿ ಕೇಂದ್ರದ ತಂಡದ ಸಿಬ್ಬಂದಿ ಹಾಗೂ ರಕ್ತದಾನಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT